ಮಂಗಳೂರು: ‘ಕಾಸರಗೋಡು ಜಿಲ್ಲೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ ‘ಕಾಸರಗೋಡು ಸಮ್ಮೇಳನ’ ಆಯೋಜಿಸಲಾಗುವುದು’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.
‘ಕಾಸರಗೋಡಿನಲ್ಲಿ ಮಲಯಾಳೀಕರಣದ ಸಂಚು ನಡೆಯುತ್ತಿದೆ’ ಎಂದು ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.




ಡಿಸೆಂಬರ್ 3ನೇ ವಾರದಲ್ಲಿ ಮಂಗಳೂರು- ಕಾಸರಗೋಡು ಹೆದ್ದಾರಿ ಬಂದ್ ಮಾಡಿ ಸತ್ಯಾಗ್ರಹ ನಡೆಸಲಾಗುವುದು ಎಂದೂ ಹೇಳಿದರು.



