ಸುಬ್ರಹ್ಮಣ್ಯ:
ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ‘ಕುಸುಮ ಸ್ನೇಹಸಂಗಮ’ ಕಾರ್ಯಕ್ರಮವು ಡಿಸೆಂಬರ್ 28ರಂದು ನಡೆಯಲಿದೆ. ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ಈ ಸ್ನೇಹಸಂಗಮವನ್ನು ಆಯೋಜಿಸಲಾಗಿದೆ.





ಕಾರ್ಯಕ್ರಮವನ್ನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ದಿನೇಶ್ ಕಾಮತ್ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಹಿಂಜಾಡಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಉಪಸ್ಥಿತರಿರಲಿದ್ದಾರೆ.
ಈ ಸ್ನೇಹಸಂಗಮದಲ್ಲಿ ವಿವಿಧ ವರ್ಷಗಳ ಹಳೆ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಳೆ ವಿದ್ಯಾರ್ಥಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.




