ಪುತ್ತೂರು: ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಸುಳ್ಯ ವಿಧಾನಸಭಾ ಕ್ಷೇತ್ರದ 21 ಕಾಮಗಾರಿಗಳಿಗೆ ರಾಜ್ಯ ವಿಪತ್ತು ಉಪಶಮನ ನಿಧಿ (SDMF) ಅಡಿಯಲ್ಲಿ ಒಟ್ಟು 10 ಕೋಟಿ 82 ಲಕ್ಷ ರೂ. ಅನುದಾನ ಮಂಜೂರಾಗಿದೆ.

ಈ ಅನುದಾನದಲ್ಲಿ ನೆಲ್ಯಾಡಿ ಗ್ರಾಮದ ಬ್ಯೆಲು–ಕುಟ್ಯಾಡಿ ಸೇತುವೆಗೆ 60 ಲಕ್ಷ ರೂ., ಅಲಂಕಾರು ಗ್ರಾಮದ ಕಚ್ಚ ರಸೆ ಮರುನಿರ್ಮಾಣಕ್ಕೆ 50 ಲಕ್ಷ ರೂ. ಸೇರಿದಂತೆ ವಿವಿಧ ರಸ್ತೆ ಹಾಗೂ ಸೇತುವೆಗಳ ಹಾನಿ ತಡೆಗೋಡೆ, ಮರುನಿರ್ಮಾಣ ಮತ್ತು ದುರಸ್ತಿ ಕಾಮಗಾರಿಗಳಿಗೆ ಅನುದಾನ ನೀಡಲಾಗಿದೆ.

ಹಾಗೂ ಸುಳ್ಯ ತಾಲ್ಲೂಕಿನ ವಿವಿಧ ರಸ್ತೆ ಮತ್ತು ಸೇತುವೆಗಳಿಗೆ ಹಾನಿ ತಡೆಗೋಡೆ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಅನುದಾನ ಒದಗಿಸಲಾಗಿದೆ. ಈ ಅನುದಾನದಿಂದ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಮೂಲಸೌಕರ್ಯಗಳ ಪುನಶ್ಚೇತನಕ್ಕೆ ನೆರವಾಗಲಿದೆ ಎಂದು ತಿಳಿಸಲಾಗಿದೆ.

ಅನುದಾನ ಮಂಜೂರಿನಿಂದ ಸ್ಥಳೀಯ ಜನರಲ್ಲಿ ಸಂತಸ ವ್ಯಕ್ತವಾಗಿದ್ದು, ಶೀಘ್ರದಲ್ಲೇ ಕಾಮಗಾರಿಗಳು ಆರಂಭಗೊಳ್ಳಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *