ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂದಿಸಿದ ನೆಲಿಯಟ್ಟೆಯಲ್ಲಿರುವ ಸುಮಾರು 1.20 ಕೋಟಿ ರೂ. ಮೌಲ್ಯದ 8 ಸೆಂಟ್ಸ್ ಜಾಗವನ್ನು ಫೆ. 28ರಂದು ದೇವಸ್ಥಾನದ ಸ್ವಾಧೀನಕ್ಕೆ ಪಡೆಯಲಾಗಿದೆ.

ಈ ಸಂಬಂಧ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿನಯ ಸುವರ್ಣ, ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಲೋಕೇಶ್ ಪಡ್ಯಾರು ಹಾಗೂ ರೋಹನ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.

ನೆಲ್ಲಿಕಟ್ಟೆಯಲ್ಲಿರುವ ಅಶ್ವತ್ಥಕಟ್ಟೆಯ ಹಿಂಭಾಗದಲ್ಲಿನ ವಾಲ್ಟರ್ ಲೋಬೋ ಅವರ ಸ್ವಾಧೀನದಲ್ಲಿದ್ದ ಜಾಗವನ್ನು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಲಾಗಿದ್ದು, 8 ಸೆಂಟ್ಸ್ ಜಾಗ ಮತ್ತು ಅದರಲ್ಲಿ ಹಂಚಿನ ಮನೆಯನ್ನು ದೇವಸ್ಥಾನ ವಾಪಸ್ ನೀಡುವಂತೆ ಮನವಿ ಮಾಡಲಾಗಿದೆ.
ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಈ ಜಾಗ ಸಹಾಯಕವಾಗಲಿದೆ ಎಂದು ವ್ಯವಸ್ಥಾಪನಾ ಸಮಿತಿ ತಿಳಿಸಿದೆ.

Leave a Reply

Your email address will not be published. Required fields are marked *