ಪುತ್ತೂರು:
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾರಿಗೊಳಿಸಲು ಸಿದ್ಧತೆ ಮಾಡಿದ್ದ ಗಡಿಪಾರು ಆದೇಶಕ್ಕೆ ಸಂಬಂಧಿಸಿದ ವಿಚಾರಣೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಮುಕ್ತಾಯಗೊಂಡಿದ್ದು, ಡಿಸೆಂಬರ್ 11ರೊಳಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಮರೋಡಿ ಪರ ವಕೀಲ ವಿಜಯವಾಸು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ತಿಮರೋಡಿ ಪರ ವಕೀಲರು ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಹಾಗೂ ಇತರ ನ್ಯಾಯಾಲಯಗಳ ತೀರ್ಪುಗಳ ದಾಖಲೆಗಳನ್ನು ಸಹಾಯಕ ಆಯುಕ್ತರಿಗೆ ಸಲ್ಲಿಸಿದರು.
“ತಿಮರೋಡಿ ಅವರ ಭಾಷಣಗಳಿಂದ ಇದುವರೆಗೆ ಯಾವುದೇ ಅಹಿತಕರ ಘಟನೆ, ಕೋಮು ಉದ್ರಿಕ್ತತೆ ಅಥವಾ ಅಶಾಂತಿ ಸಂಭವಿಸಿಲ್ಲ” ಎಂದು ವಕೀಲರು ಸ್ಪಷ್ಟಪಡಿಸಿದರು.

ಹಿಂದಿನ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಆ ಸಂದರ್ಭದಲ್ಲಿ ತಿಮರೋಡಿ ವಿರುದ್ಧ ಸೆಕ್ಷನ್ 55A ಅಥವಾ 55B ಅಡಿಯಲ್ಲಿ ಆದೇಶ ನೀಡಲಾಗಿದೆವೆಯೋ ಎಂದು ಕೋರ್ಟ್ ಸಹಾಯಕ ಆಯುಕ್ತರಿಂದ ಸ್ಪಷ್ಟನೆ ಕೇಳಿತ್ತು.
ಹೈಕೋರ್ಟ್ ಡಿಸೆಂಬರ್ 15ರೊಳಗೆ ವಿವರವಾದ ವರದಿ ಸಲ್ಲಿಸಲು ಸೂಚಿಸಿ, ಅಷ್ಟರವರೆಗೆ ಗಡಿಪಾರು ಆದೇಶಕ್ಕೆ ತಡೆ ನೀಡಿತ್ತು.ವಕೀಲ ವಿಜಯವಾಸು ಹೇಳಿದರು:

Leave a Reply

Your email address will not be published. Required fields are marked *