ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಘಟನಾ ಪುನರ್‌ರಚನೆಯ ಭಾಗವಾಗಿ ನಗರ ಮತ್ತು ಗ್ರಾಮಾಂತರ ಮಂಡಳಿಗೆ ಹೊಸ ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ.

ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾಗಿ ಸುನಿಲ್ ದಡ್ಡು ಮತ್ತು ಲೋಕೇಶ್ ಚಾಕೋಟೆ ಅವರನ್ನು ನಿಯುಕ್ತಿಗೊಳಿಸಲಾಗಿದ್ದು, ಪುತ್ತೂರು ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾಗಿ ಯುವರಾಜ್ ಪಿರಿಯತ್ತೋಡಿ ಹಾಗೂ ಶಶಿಧರ್ ನಾಯಕ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಇದಕ್ಕೂ ಮೊದಲು ಪುತ್ತಿಲ ಪರಿವಾರದ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ ನಿಕ್ಕಿಲಾಡಿ, ನಾಗೇಶ್ ಇವರಿಗೆ ಗ್ರಾಮಾಂತರ ಹಾಗೂ ನಗರ ಮಂಡಲಗಳ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿಗಳು ನೀಡಲಾಗಿದ್ದವು. ಆದರೆ, ಪುತ್ತಿಲ ಪರಿವಾರದ ಅರುಣ್ ಪುತ್ತಿಲ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡದ ಕಾರಣದಿಂದಾಗಿ, ಈ ನಾಲ್ವರು ಕೆಲವು ತಿಂಗಳ ಹಿಂದಿನಿಂದ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದುಕೊಂಡಿದ್ದರು.

ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪುತ್ತೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ನಡೆದ ‘ಅಟಲ್ ವಿರಸತ್’ ಕಾರ್ಯಕ್ರಮಕ್ಕೂ ಗೈರುಹಾಜರಾಗಿದ್ದ ಅವರು, ಈ ಬೆಳವಣಿಗೆಯ ನಂತರ ಅಧಿಕೃತವಾಗಿ ತಮ್ಮ ಜವಾಬ್ದಾರಿಯಿಂದ ಬಿಡುಗಡೆಗೊಳಿಸಲ್ಪಟ್ಟಿದ್ದಾರೆ.

ಪಕ್ಷದ ಪುನರ್‌ಸಂಘಟನೆ ಹಾಗೂ ಕ್ಷೇತ್ರ ಮಟ್ಟದ ಬಲವರ್ಧನೆಗಾಗಿ ಈ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಪಕ್ಷದ ಒಳವಲಯದಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *