ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಎರ್ಮೆತ್ತಿಮಾರ್ ನಲ್ಲಿ ಆಸರೆಯಾಗಿದ್ದ ಜೀವವೊಂದನ್ನು ಸಣ್ಣ ಅಜಾಗರೂಕತೆ ಕಿತ್ತುಕೊಂಡಿದೆ. ಎರ್ಮೆತ್ತಿಮಾರ್ ಎಂಬಲ್ಲಿ ನೀರಿನ ಟ್ಯಾಂಕ್ ತೊಳೆಯುವ ವೇಳೆ ಕೃಷಿಕನೊಬ್ಬ ಟೆರೇಸ್ ನಿಂದ ಕೆಳಗೆ ಬಿದ್ದು ಮೃತಪಟ್ಟ ದುರ್ಘಟನೆ ನಡೆದಿದೆ.

ಮೃತರನ್ನು ಪದ್ಮನಾಭ ಗೌಡ (55) ಎಂದು ಗುರುತಿಸಲಾಗಿದೆ. ಕೃಷಿಕರಾಗಿದ್ದ ಪದ್ಮನಾಭ ಗೌಡ ಅವರು, ಇತ್ತೀಚಿನ ದಿನಗಳಲ್ಲಿ ಆಟೋ ಚಾಲನೆಯ ಮೂಲಕ ಜೀವನ ನಡೆಸುತ್ತಿದ್ದರು.
ಮನೆಯ ಹತ್ತಿರದಲ್ಲಿದ್ದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಕಾಲು ಜಾರಿ ಟೆರೇಸ್ ನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯ ಸುದ್ದಿ ತಿಳಿದ ಕೂಡಲೇ ಕುಟುಂಬದವರಲ್ಲಿ ಶೋಕದ ವಾತಾವರಣ ಆವರಿಸಿದೆ.ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *