ಪುತ್ತೂರು: ಪುತ್ತೂರು ತಾಲೂಕಿನ ಹಾರಾಡಿ ಪ್ರದೇಶದ ರೈಲ್ವೇ ಹಳಿಯಲ್ಲಿ ಫೆಬ್ರವರಿ 20ರಂದು ರೈಲು ಡಿಕ್ಕಿಯಾದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರು ಬೆಳಿಗ್ಗೆ ರೈಲ್ವೇ ಹಳಿಯ ಸಮೀಪ ಸಂಚರಿಸುತ್ತಿದ್ದ ವೇಳೆ ಹಳಿಯ ಮೇಲೆಯೇ ವ್ಯಕ್ತಿಯೊಬ್ಬರು ರಕ್ತಸಿಕ್ತ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ವೇಗವಾಗಿ ಸಾಗುತ್ತಿದ್ದ ರೈಲು ಡಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೃತರ ಗುರುತು ಹಾಗೂ ಘಟನೆಯ ನಿಖರ ಕಾರಣಗಳ ಬಗ್ಗೆ ತನಿಖೆ ಮುಂದುವರಿದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *