ಪುತ್ತೂರು: ಸಾಮಾನು ಖರೀದಿ ನೆಪದಲ್ಲಿ ಅಂಗಡಿಗೆ ಬಂದು ಇಬ್ಬರು ಯುವಕರು ಜಗಳ ತೆಗಿದು ದಾಂಧಲೆ ನಡೆಸಿ, ಅಂಗಡಿಯಲ್ಲಿದ್ದ ವಸ್ತುಗಳನ್ನು ಹಾಳುಮಾಡಿ ಅಂಗಡಿ ಮಾಲೀಕನಿಗೆ ಅವಾಚ್ಯವಾಗಿ ಬೈದು ಬೆದರಿಕೆ ಹಾಕಿದ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಾಣಾಜೆ ಗ್ರಾಮದ ಧೈತೋಟದ ಅಂಗಡಿ ಹೊಂದಿರುವ ವಿಮಲ (45) ಎಂಬವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

ಜನವರಿ 18ರಂದು ರಾತ್ರಿ ಸುಮಾರು 8.30ರ ವೇಳೆಗೆ ಆರೋಪಿಗಳು ಅಂಗಡಿಗೆ ಬಂದು ಹಣ ಪಾವತಿಸದೇ ಸಾಮಾನು ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ವಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ಜಗಳ ಆರಂಭಿಸಿ, ಅಂಗಡಿಯಲ್ಲಿದ್ದ ಚಾಕಲೇಟ್, ಬಿಸ್ಕೆಟ್ ಸೇರಿದಂತೆ ಇತರ ವಸ್ತುಗಳನ್ನು ನೆಲಕ್ಕೆ ಎಸೆದು ಹಾನಿಗೊಳಿಸಿದ್ದಾರೆ. ಅಲ್ಲದೆ ಸುಮಾರು ₹5,000 ಮೌಲ್ಯದ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನೀನು
ಪಂಚಾಯತ್ ಸದಸ್ಯ ಅಲ್ಲವಾ? ನಿನ್ನ ಅಂಗಡಿಯನ್ನು ಮುಚ್ಚಿಸುತ್ತೇನೆ, ನಿನ್ನ ಮನೆಗೆ ನುಗ್ಗಿ ನಿನ್ನ ಮನೆಯವರನ್ನೂ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ BNS ಕಲಂ 351(4), 352(2), 3(5) ಹಾಗೂ 22-2023 ಅಡಿ (0008/2026) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *