ಪುತ್ತೂರು: ಪುತ್ತೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹಠಾತ್ ಅಸ್ವಸ್ಥಗೊಂಡ ಘಟನೆ ನಡೆದಿದೆ. ಪ್ರಯಾಣದ ಮಧ್ಯೆ ಏಕಾಏಕಿ ಅಸ್ವಸ್ಥಗೊಂಡ ಅವರು ಬಸ್ಸಿನೊಳಗೆ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.





ಘಟನೆಯನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಪರಿಸ್ಥಿತಿ ಅರಿತು ಸಮಯ ವ್ಯರ್ಥ ಮಾಡದೆ ಅದೇ ಬಸ್ಸಿನಲ್ಲಿ ಗಾಯಾಳು ಪ್ರಯಾಣಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ವ್ಯವಸ್ಥೆ ಮಾಡಿದ್ದಾರೆ. ಚಾಲಕನ ತ್ವರಿತ ಹಾಗೂ ಮಾನವೀಯ ಕ್ರಮದಿಂದ ಪ್ರಯಾಣಿಕನಿಗೆ ಸಮಯಕ್ಕೆ ಚಿಕಿತ್ಸೆ ದೊರೆತಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.




