ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಬೆಟ್ಟಂಪಾಡಿಯ ಯುವಕರೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ವರದಿಯಾಗಿದೆ.

ಬೆಟ್ಟಂಪಾಡಿ ಗ್ರಾಮದ ತಲೆಪ್ಪಾಡಿ ನಿವಾಸಿ ಅಶ್ರಫ್ ಕೆ. ಅವರ ಪುತ್ರ ಮೊಹಮ್ಮದ್ ಸುಹೈಬ್ (19) ಮೃತಪಟ್ಟ ಯುವಕ. ಅವರು ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಜನವರಿ 28ರಂದು ಬೆಳಗ್ಗೆ ಯಾವುದೋ ಕಾರಣದಿಂದ ಮನನೊಂದು ಇಲಿ ಪಾಶನ ಸೇವಿಸಿ ಅಸ್ವಸ್ಥಗೊಂಡಿದ್ದರು.

ವಿಷಯ ತಿಳಿದ ತಕ್ಷಣ ತಂದೆ ಅಶ್ರಫ್ ಅವರು ಮೊಹಮ್ಮದ್ ಸುಹೈಬ್ ಅವರನ್ನು ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಅಲ್ಲಿಯೂ ಚಿಕಿತ್ಸೆ ಫಲಿಸದೆ ಫೆಬ್ರವರಿ 2ರಂದು ಅವರು ನಿಧನರಾದರು ಎಂದು ತಿಳಿದುಬಂದಿದೆ. ಈ ಸಂಬಂಧ ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *