ಸವಣೂರು : ಇಲಿ ಪಾಷಣ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸವಣೂರು ಗ್ರಾಮದ ಅಗರಿ ನಿವಾಸಿ ರಾಮಚಂದ್ರ ಅವರ ಪುತ್ರ ಮೇಘರಾಜ್ ಎಂದು ಗುರುತಿಸಲಾಗಿದೆ. ಡಿಸೆಂಬರ್ 25ರಂದು ಮನೆಯಲ್ಲಿ ಇಲಿ ಪಾಷಣ ಸೇವಿಸಿದ ಪರಿಣಾಮ ಅಸ್ವಸ್ಥಗೊಂಡಿದ್ದ ಮೇಘರಾಜರನ್ನು ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ವೈದ್ಯರು ಪರಿಶೀಲಿಸಿ ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆಯ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ಆದರೆ ಅವರು ಆಸ್ಪತ್ರೆಗೆ ತೆರಳದೆ ಮನೆಗೆ ವಾಪಸ್ಸಾಗಿದ್ದರು.




ಡಿಸೆಂಬರ್ 28ರಂದು ಮನೆಯಲ್ಲಿ ತೀವ್ರ ವಾಂತಿ ಮಾಡಿಕೊಂಡು ಮತ್ತೆ ಅಸ್ವಸ್ಥಗೊಂಡ ಮೇಘರಾಜರನ್ನು ಪುತ್ತೂರಿನ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಕುರಿತು ಮೃತನ ತಂದೆ ರಾಮಚಂದ್ರ ಅವರು ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.





