ಸಕಲೇಶಪುರ : ನೇತ್ರಾವತಿ ರೈಲ್ವೆ ಮಾರ್ಗದಲ್ಲಿ ತುರ್ತು ಹಳಿ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.





ಹಳಿ ದುರಸ್ತಿ ಕಾರ್ಯದ ಹಿನ್ನಲೆಯಲ್ಲಿ ಈ ಮಾರ್ಗದ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳ ಕಾಲ ರದ್ದುಗೊಳಿಸಲಾಗಿದ್ದು, ಇದರಿಂದ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.
ರೈಲ್ವೆ ಇಲಾಖೆ ಪ್ರಕಾರ, ಕಾಮಗಾರಿ ಪೂರ್ಣಗೊಂಡ ಬಳಿಕ ಸಂಚಾರವನ್ನು ಪುನರಾರಂಭಿಸಲಾಗುತ್ತದೆ. ಪ್ರಯಾಣಿಕರು ಪರ್ಯಾಯ ವ್ಯವಸ್ಥೆಗಳನ್ನು ಬಳಸಿಕೊಳ್ಳುವಂತೆ ಮನವಿ ಮಾಡಲಾಗಿದೆ.




