ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಯೋಜನೆಗಳ ಅನುಷ್ಠಾನದ ಸ್ಥಿತಿ, ಫಲಾನುಭವಿಗಳಿಗೆ ತಲುಪುತ್ತಿರುವ ಸೇವೆಗಳು ಹಾಗೂ ವಿವಿಧ ಇಲಾಖೆಗಳ ಕಾರ್ಯಪದ್ಧತಿ ಕುರಿತು ಚರ್ಚೆ ನಡೆಸಲಾಯಿತು. ಯೋಜನೆಗಳ ಪರಿಣಾಮಕಾರಿ ಜಾರಿಗಾಗಿ ಅಗತ್ಯ ಸೂಚನೆಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಜೋಕಿಮ್ ಡಿಸೋಜ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನವೀನ್ ಭಂಡಾರಿ, ಪುತ್ತೂರು ತಾಲೂಕು ಪ್ರಾಧಿಕಾರದ ಸದಸ್ಯರು ಹಾಗೂ ಪಂಚ ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *