ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೋಷನ್ ಕಿರಣ್ ಡಿಸೋಜಾ (21) ಅವರು ಅವಿವಾಹಿತರಾಗಿದ್ದು, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ರೋಷನ್ ಕಿರಣ್ ಡಿಸೋಜಾ ಅವರು ಜ. 15ರಂದು ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ಹೊರಟಿದ್ದು, ನಂತರ ಮರಳಿ ಮನೆಗೆ ಬಾರದಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದು, ಸಂಬಂಧಿಕರು ಮತ್ತು ಸ್ನೇಹಿತರಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ನಾಪತ್ತೆಯಾಗಿರುವ ರೋಷನ್ ಕಿರಣ್ ಡಿಸೋಜಾ ಅವರು ಸುಮಾರು 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಮಾನ್ಯ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ನಾಪತ್ತೆಯಾಗುವ ಸಮಯದಲ್ಲಿ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಯಾರಿಗಾದರೂ ರೋಷನ್ ಕಿರಣ್ ಡಿಸೋಜಾ ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆಗೆ ಅಥವಾ ಬೆಳ್ತಂಗಡಿ ಪೊಲೀಸರನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.




