ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ.

ದೆಹಲಿಯಿಂದ ಪ್ರಧಾನಿ ಮೋದಿಯವರು 10:05ಕ್ಕೆ ಹೆಚ್‌ಎಎಲ್‌ಗೆ (HAL) ಆಗಮಿಸಲಿದ್ದು, ಬಳಿಕ ಅಲ್ಲಿಂದ 10:50ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ತಪೋವನದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಈ ವೇಳೆ ಮೋದಿಗೆ ಶ್ರೀ ಮಠದವರು ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ.

ಮೊದಲು ಮೋದಿ ಗೋರಕ್ಷಕನಾಥ ತಪಸ್ಸು ಮಾಡಿ, ಜ್ವಾಲಾಪೀಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಕಾಲಭೈರವೇಶ್ವರಸ್ವಾಮಿ ಸನ್ನಿಧಿಗೆ ತೆರಳಲಿದ್ದಾರೆ. ಅಲ್ಲಿ ದರ್ಶನ ಪಡೆದು ಮಂಗಳಾರತಿ ಮಾಡಲಿದ್ದಾರೆ. ಬಳಿಕ ಗುರು ಭೈರವೈಕ್ಯ ಮಂದಿರದ ಉದ್ಘಾಟನೆ ಮಾಡಲಿದ್ದಾರೆ. ಆನಂತರ ಮಂದಿರ ವೀಕ್ಷಿಸಿ ಬಾಲಗಂಗಾಧರನಾಥ ಶ್ರೀಗಳಿಗೆ ನಮನ ಸಲ್ಲಿಸಲಿದ್ದಾರೆ. ನಂತರ ಕ್ರೀಡಾಂಗಣದ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ವೇಳೆ ವೇದಿಕೆಯಲ್ಲಿ ಸೌಂದರ್ಯ ಲಹರೀ ಮತ್ತು ಶಿವಮಹಿಮ್ನಹಃ ಸ್ತೋತ್ರಮ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಈ ವೇಳೆ ಶ್ರೀ ಮಠದಿಂದ ಮೋದಿಗೆ ಉಡುಗೊರೆ ನೀಡಿ, ಸನ್ಮಾನಿಸಿ ಗೌರವ ಸಲ್ಲಿಸಲಿದ್ದಾರೆ.

ಗೌರವ ಸನ್ಮಾನದ ಬಳಿಕ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಭಕ್ತರನ್ನು ಉದ್ದೇಶಿಸಿ ಪ್ರಧಾನಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್‌ನಲ್ಲಿ ಹೆಚ್‌ಎಎಲ್‌ಗೆ ಮರಳಿ, ಅಲ್ಲಿಂದ ಕೇರಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Leave a Reply

Your email address will not be published. Required fields are marked *