ನವದೆಹಲಿ: ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ ಭೇಟಿ ನೀಡಿ ಪ್ರಾರ್ಥನೆ ಮಾಡಿದರು.

ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್ ಸ್ವರೂಪ್ ಅವರು ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು. ಮೋದಿ ಭೇಟಿಯ ಸಂದರ್ಭದಲ್ಲಿ ದೆಹಲಿ ಮತ್ತು ಉತ್ತರ ಭಾರತದ ಹಲವು ಕ್ರಿಶ್ಚಿಯನ್‌ ಬಾಂಧವರು ಭಾಗಿಯಾಗಿದ್ದರು.

ಭೇಟಿಯ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಮೋದಿ, ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ನಲ್ಲಿ ಕ್ರಿಸ್‌ಮಸ್ ಬೆಳಗಿನ ಸೇವೆಯಲ್ಲಿ ಭಾಗವಹಿಸಿದ್ದೆ. ಈ ಸೇವೆಯು ಪ್ರೀತಿ, ಶಾಂತಿ ಮತ್ತು ಕರುಣೆಯ ಅಕಾಲಿಕ ಸಂದೇಶವನ್ನು ಪ್ರತಿಬಿಂಬಿಸುತ್ತದೆ. ಕ್ರಿಸ್‌ಮಸ್‌ನ ಚೈತನ್ಯವು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸದ್ಭಾವನೆಯನ್ನು ಪ್ರೇರೇಪಿಸಲಿ ಎಂದು ಬರೆದುಕೊಂಡಿದ್ದಾರೆ.

ಯೇಸುಕ್ರಿಸ್ತನ ಬೋಧನೆಗಳು ನಮ್ಮ ಸಮಾಜದಲ್ಲಿ ಸಾಮರಸ್ಯವನ್ನು ಬಲಪಡಿಸಲಿ. ಎಲ್ಲರಿಗೂ ಕ್ರಿಸ್ಮಸ್‌ ಹಬ್ಬದ ಶುಭಾಶಯಗಳು ಎಂದು ಪೋಸ್ಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *