ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಲು ಅವಕಾಶವಿಲ್ಲದಿದ್ದರೂ ಅಲ್ಲೊಂದು ಇಲ್ಲೊಂದು ಪ್ರಕರಣಗಳು ನಡೆಯುತ್ತಲೇ ಇದೆ, ಇದರ ನಡುವೆಯೇ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಕೆಂಪೇಗೌಡ ವಿಮಾನದ ಟರ್ಮಿನಲ್ 2 ರಲ್ಲಿ ಸಾರ್ವಜನಿಕವಾಗಿ ಮುಸ್ಲಿಮರು ನಮಾಜ್ ಮಾಡಿದ್ದು, ಏರ್ಪೋಟ್ ಸಿಬ್ಬಂದಿ ಭದ್ರತಾ ಪಡೆ ಅಧಿಕಾರಿಗಳು ನೋಡಿಯೂ ಸುಮ್ಮನೆ ನಿಂತಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಏರ್ಪೋರ್ಟ್ ಗೆ ಮೆಕ್ಕಾಗೆ ತೆರಳುತ್ತಿದ್ದವರನ್ನು ಬಿಳ್ಕೊಡಲು ಸುಮಾರು ಹತ್ತಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. ಅವರನ್ನು ಕಳುಹಿಸಿ ವಾಪಸ್ ಬರುವ ವೇಳೆ ಟರ್ಮಿನಲ್ 2 ರಲ್ಲಿ ಸಾರ್ವಜನಿಕವಾಗಿ ನಮಾಜ್ ಮಾಡಿದ್ದಾರೆ.
ಏರ್ಪೋಟ್ ಒಳ ಭಾಗದಲ್ಲಿ ಪ್ರಯಾಣಿಕರಿಗೆ ಪ್ರಾರ್ಥನಾ ಕೊಠಡಿಯಿದ್ದರೂ ಕೂಡ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಿರುವುದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು, ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಇನ್ನು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಆರ್ ಎಸ್ ಎಸ್ ಮೆರವಣಿಗೆ ಅನುಮತಿ ನಿರಾಕರಿಸುತ್ತಿದ್ದ ಕಾಂಗ್ರೆಸ್ ಸರ್ಕಾರ.. ಈ ಬಗ್ಗೆ ಯಾಕೆ ಗಮನ ಹರಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ವಿಮಾನ ನಿಲ್ದಾಣದ ಒಳಗಡೆ ಈ ರೀತಿ ನಮಾಜ್ ಮಾಡುವುದಕ್ಕೆ ಅನುಮತಿ ಹೇಗೆ ನೀಡಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನೀವು ಹೇಗೆ ಒಪ್ಪುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಈ ವ್ಯಕ್ತಿಗಳು ಹೆಚ್ಚಿನ ಭದ್ರತೆಯ ವಿಮಾನ ನಿಲ್ದಾಣ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಸಂಬಂಧಿತ ಅಧಿಕಾರಿಗಳ ಅನುಮತಿಯನ್ನು ಪಡೆದುಕೊಂಡು ಆರ್‌ಎಸ್‌ಎಸ್ ಪಾಠ ಸಂಚಾಲನೆ ನಡೆಸಿದಾಗ ಸರ್ಕಾರ ಆಕ್ಷೇಪಿಸುತ್ತದೆ.
ಆದರೆ ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ನಡೆಯುವ ಇಂತಹ ಚಟುವಟಿಕೆಗಳನ್ನು ಏಕೆ ನಿರ್ಲಕ್ಷಿಸುತ್ತದೆ? ಇಂತಹ ಸೂಕ್ಷ್ಮ ಭದ್ರತಾ ವಲಯದಲ್ಲಿ ಈ ಘಟನೆ ಗಂಭೀರ ಭದ್ರತಾ ಕಾಳಜಿಗೆ ಕಾರಣವಾಗುವುದಿಲ್ಲವೇ? ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

