
ಕಡಬ: ನವೆಂಬರ್ 14 ರಂದು ನಡೆದ ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಬಿಹಾರದಲ್ಲಿ ಎನ್‌ಡಿಎ ಯಶಸ್ಸು ಖಚಿತವಾದ ಬಳಿಕ ಕಡಬದ ಬಿಜೆಪಿ ಕಾರ್ಯಕರ್ತರು ನಿನ್ನೆ ಸಂಜೆ ಪಟಾಕಿ ಸಿಡಿಸಿ ಹರ್ಷೋದ್ಗಾರ ವ್ಯಕ್ತಪಡಿಸಿದರು.





