ನವದೆಹಲಿ: ದೆಹಲಿ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ i20 ಕಾರು ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರಿನ ಮಾಲೀಕ ತಾರೀಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜಮ್ಮುಕಾಶ್ಮೀರದ ಪುಲ್ವಾಮಾ ಮೂಲದ ತಾರೀಕ್ ಗೆ ಸೇರಿದ i20 ಕಾರಿನ ಮಾಲೀಕನಾಗಿದ್ದಾನೆ. ತಾರೀಕ್ HR 26 CE 7674 ನಂಬರ್ ನ ಕಾರನ್ನು ಡೀಲರ್ ನಿಂದ ಖರೀದಿ ಮಾಡಿದ್ದ. ಇದೀಗ ಪೊಲೀಸರು ಕಾರಿನ ಮಾಲೀಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ದೆಹಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ) ಮತ್ತು ಬಿಎನ್‌ಎಸ್‌ನ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.



