ಕಡಬ : ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತಿಬೆಟ್ಟುವಿನಲ್ಲಿ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಲಾಯಿತು.





ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಸಣ್ಣ ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಶಿಕ್ಷಣದ ಬುನಾದಿ ಹಾಕುವಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಮಹತ್ತರವಾಗಿದೆ. ಸುಸಜ್ಜಿತ ಹಾಗೂ ಸುರಕ್ಷಿತ ಕಟ್ಟಡಗಳು ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣವನ್ನು ಒದಗಿಸುತ್ತವೆ. ಸರ್ಕಾರದಿಂದ ಮಕ್ಕಳಿಗೆ ಪೌಷ್ಟಿಕ ಆಹಾರದ ವ್ಯವಸ್ಥೆಯೂ ಕಲ್ಪಿಸಲಾಗುತ್ತಿದ್ದು, ಅವರ ಸಮಗ್ರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.



ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಪಿ.ವೈ ಕುಸುಮ, ಎಪಿಎಂಸಿ ಮಾಜಿ ನಿರ್ದೇಶಕ ಮೇದಪ್ಪ ಗೌಡ ದೆಪ್ಪುನಿ, ಸಿಡಿಪಿಒ ಹರೀಶ್ ಕೆ., ಶಿರಾಡಿ ವಲಯ ಮೇಲ್ವಿಚಾರಕಿ ಪುಷ್ಪಾವತಿ, ಮುಖಂಡರಾದ ಪೂವಪ್ಪ ಗೌಡ ಐತೂರು, ಮೇದಪ್ಪ ಗೌಡ ಹೊಸ ಕ್ಲೂ, ಮರ್ದಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜನಾರ್ಧನ ಗೌಡ ಪುತ್ತಿಲ, ಹರೀಶ್ ಕೊಡೆಂದೂರು, ಉಪಾಧ್ಯಕ್ಷೆ ಜಯಲಕ್ಷ್ಮಿ ಬೋಳಂತಡ್ಕ, ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವಸಂತಿ ಹಾಗೂ ಅಂಗನವಾಡಿ ಸಹಾಯಕಿ ಯಮುನಾ ಉಪಸ್ಥಿತರಿದ್ದರು.

