ಪುತ್ತೂರು: ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಪುತ್ತೂರು ಇವರ ನೂತನ ಕಚೇರಿ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ ಡಿಸೆಂಬರ್ 13ರಂದು (ಶನಿವಾರ) ಸಂಜೆ 4 ಗಂಟೆಗೆ ಪರ್ಲಡ್ಕದಲ್ಲಿ ನಡೆಯಲಿದೆ.




ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಅಧ್ಯಕ್ಷತೆ ವಹಿಸಲಿದ್ದು, ಹಲವು ಗಣ್ಯರು ಹಾಜರಿರಲಿದ್ದಾರೆ. ಗ್ರಾಮ ಪಂಚಾಯತ್ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಲಾಗಿದೆ.



