ಸುಳ್ಯದಲ್ಲಿ ರಸ್ತೆ ಅಪಘಾತ – ಪ್ರಯಾಣಿಕರಿಗೆ ಗಂಭೀರ ಗಾಯ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಓಮ್ನಿ ಕಾರೊಂದು ಪಲ್ಟಿಯಾಗಿ ವಾಹನದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸುಳ್ಯ ತಾಲೂಕಿನ ಕೊಯನಾಡು ಪ್ರದೇಶದಲ್ಲಿ ಸಂಭವಿಸಿದೆ.

ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಕೊಯನಾಡು ಮೇಲಿನ ಪೋಸ್ಟ್ ಆಫೀಸ್ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಪಲ್ಟಿ ಹೊಡೆದಿದೆ. ಅಪಘಾತದ ತೀವ್ರತೆಯಿಂದ ವಾಹನಕ್ಕೆ ಭಾರೀ ಹಾನಿಯಾಗಿದೆ.
ಘಟನೆಯ ಪರಿಣಾಮವಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ವಾಹನ ಚಾಲಕರು ತಕ್ಷಣವೇ ನೆರವಿಗೆ ಧಾವಿಸಿದರು. ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಕುರಿತು ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *