ನಿಡ್ಲೆ : ಆನಂದ ವೆಲ್ಟ್ಸ್ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಟ್ಟಡದ ಮೇಲ್ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನವೆಂಬರ್ 15ರಂದು ತಡರಾತ್ರಿ ಸಂಭವಿಸಿದೆ.

ಮೃತಪಟ್ಟವನನ್ನು ನಿಡ್ಲೆ ಗ್ರಾಮದ ಮಾಪಲಾಜೆ ನಿವಾಸಿ ಸುಂದರ ಶೆಟ್ಟಿ ಅವರ ಪುತ್ರ ಮನೀಶ್ (20) ಎಂದು ಗುರುತಿಸಲಾಗಿದೆ.

ಮನೆಯ ಮೇಲ್ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಮನೀಶ್ ಅವರು ಆಕಸ್ಮಿಕವಾಗಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *