ಪುತ್ತೂರು: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಇವರ ನೇತೃತ್ವದಲ್ಲಿ ಪುತ್ತೂರು ಶಿವಬ್ರಾಹ್ಮಣ (ಸ್ಥಾನಿಕ) ಸಮಾಜ ಸೇವಾ ಸಂಘದ ಆತಿಥೇಯತ್ವದಲ್ಲಿ ಸ್ಥಾನಿಕ ಬ್ರಾಹ್ಮಣ ಜಾಗತಿಕ ಸಮಾವೇಶ ಜ. 24 ಮತ್ತು 25 ರಂದು ಪುತ್ತೂರು ಕಲ್ಲಾರೆಯಲ್ಲಿರುವ ಶಿವಕೃಪ ಸಭಾಭವನದಲ್ಲಿ ನಡೆಯಲಿದೆ.

ಸ್ಥಾನಿಕ ಬ್ರಾಹ್ಮಣ ಮಹಾಮಂಡಲದ ಅಧ್ಯಕ್ಷ ಮಂಜುನಾಥ ಹೆಬ್ಬಾರ್ ಉಡುಪಿ ಮತ್ತುಪುತ್ತೂರು ಶಿವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ಕೆ. ಜಗನ್ನಿವಾಸ ರಾವ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.

ಸಮಾಜವನ್ನು ಸಂಘಟಿಸಲು, ಜಗತ್ತಿನ ಮೂಲೆಮೂಲೆಯಲ್ಲಿರುವ ಸ್ಥಾನಿಕ ಬ್ರಾಹ್ಮಣರ ಮಧ್ಯೆ ಸಮನ್ವಯ ಉಂಟು ಮಾಡಲು, ಸಮಾಜದ ಪ್ರಚಲಿತ ಸವಾಲುಗಳು, ಭವಿಷ್ಯದ ಯೋಜನೆಗಳ ಬಗ್ಗೆ ಮಂಥನ ಮಾಡುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾಜದ ಒಟ್ಟು 20 ಸಂಘಟನೆಗಳು ಸಹಯೋಗ ನೀಡಿವೆ ಎಂದವರು ಹೇಳಿದರು.

ಜ.24 ರಂದು ಬೆಳಗ್ಗೆ 9.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ.

ಮಹಾಮಂಡಲದ ಅಧ್ಯಕ್ಷ ಮಂಜುನಾಥ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಪುತ್ತೂರಿನ ಶಿವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ಕೆ. ಜಗನ್ನಿವಾಸ ರಾವ್ ವಹಿಸಲಿದ್ದಾರೆ. ಧಾರ್ಮಿಕ ಪರಿಷತ್‌ನ ಮಾಜಿ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಪ್ರಧಾನ ಉಪನ್ಯಾಸ ನೀಡಲಿದ್ದಾರೆ. ಶಾಸಕ ಅಶೋಕ್ ರೈ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ದೇವಾನAದ ಭಟ್ ಬೆಳುವಾಯಿ ಬರೆದ ಸ್ಥಾನಿಕ ಬೆಳಕು ಎಂಬ ಕೃತಿ ಬಿಡುಗಡೆ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಅಪರಾಹ್ನ ಸಮಾಜ ಸಂಘಟನೆ ಹಾಗೂ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಎಂಬ ವಿಷಯದ ವಿಚಾರಗೋಷ್ಠಿ ನಡೆಯಲಿದೆ.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಜ.೨೫ರಂದು ಬೆಳಗ್ಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು 9 ಗಂಟೆಗೆ ಸಮಾಜದಲ್ಲಿ ಒಗ್ಗಟ್ಟು ಎಂಬ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ 2.15ರಿಂದ ಸಾಮಾಜಿಕ ಬದುಕಿನಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ವಿಚಾರಗೋಷ್ಠಿ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5.30ರಿಂದ ಸಮಾರೋಪ ಸಮಾರಂಭ ನಡೆಯಲಿದೆ. ಇದರಲ್ಲಿ ಸ್ಥಾನಿಕ ರತ್ನ ಬಿರುದು ಪ್ರದಾನ ನಡೆಯಲಿದೆ ಎಂದರು.
ಜಾಗತಿಕ ಮಟ್ಟದ ಸ್ಥಾನಿಕ ಸಮಾವೇಶ ಇದು ೬ನೆಯದ್ದಾಗಿದೆ. ಸುಮಾರು 3 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಹಾಮಂಡಲದ ಕಾರ್ಯದರ್ಶಿ ಬಾಲಕೃಷ್ಣ ರಾವ್ ಎ. ಪುತ್ತೂರು, ಪ್ರಮುಖರಾದ ದೇವಾನಂದ ಭಟ್, ಸತೀಶ್ ರಾವ್, ವಿನೋದ್ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *