ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಮೂರನೇ ಆರೋಪಿ ಮಂಜುನಾಥ ಶೆನೈ ಹಾಗೂ ನಾಲ್ಕನೇ ಆರೋಪಿ ಕೇಶವ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಸರಿತಾ ಡಿ ಅವರು ಇಬ್ಬರಿಗೂ ಜಾಮೀನು ನೀಡುವಂತೆ ಆದೇಶಿಸಿದರು.

ನ್ಯಾಯಾಲಯ ವಿಧಿಸಿದ ಷರತ್ತುಗಳ ಪ್ರಕಾರ, ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಸಲ್ಲಿಸಬೇಕು. ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಅಥವಾ ಸಾಕ್ಷಿ ನಾಶಕ್ಕೆ ಯತ್ನಿಸಬಾರದು. ಜೊತೆಗೆ ವಿಚಾರಣೆ ಸಂದರ್ಭದಲ್ಲಿ ತಪ್ಪದೇ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

Leave a Reply

Your email address will not be published. Required fields are marked *