ಬಾರಕೂರಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದ ವಿದೇಶಿ ಮಹಿಳೆ ಯಾವುದೇ ದಾಖಲಾತಿ ನೀಡದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ಆಸ್ಪತ್ರೆಯ ವೈದ್ಯರು ತಕ್ಷಣ ಬ್ರಹ್ಮಾವರ ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರ ವಿಚಾರಣೆಯಲ್ಲಿ ಹನೆಹಳ್ಳಿ ಗ್ರಾಮದ ಸಂಕಮ್ಮ ತಾಯಿ ರೆಸಾರ್ಟ್‌ನಲ್ಲಿ ದಾಖಲೆಗಳಿಲ್ಲದೆ 6 ಮಂದಿ ವಿದೇಶಿಗರು ಹಾಗೂ 3 ಸಣ್ಣ ಮಕ್ಕಳು ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ.


ಈ ವ್ಯಕ್ತಿಗಳ ಬಳಿ ಪಾಸ್‌ಪೋರ್ಟ್, ವೀಸಾ ಅಥವಾ ಯಾವುದೇ ಗುರುತಿನ ದಾಖಲೆಗಳಿಲ್ಲದಿದ್ದು, ಯಾವ ದೇಶದ ಪ್ರಜೆಗಳೆಂಬುದು ಸ್ಪಷ್ಟವಾಗಿಲ್ಲ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಇಮಿಗ್ರೇಶನ್ ಮತ್ತು ಫಾರಿನರ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *