ಬಂಟ್ವಾಳ:ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ 2026 ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.

ಉಭಯ ಸಮಿತಿಗಳ ಗೌರವಾಧ್ಯಕ್ಷರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹೈಕೋರ್ಟಿನ ಹಿರಿಯ ನ್ಯಾಯವಾದಿಗಳಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿಯಾಗಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಕೃಷ್ಣ ಎಂ.ಆರ್. ಕಡಬ, ಕಾರ್ಯಾಧ್ಯಕ್ಷರಾಗಿ ಶ್ಯಾಮ್ ಸುದರ್ಶನ್ ಹೊಸಮೂಲೆಯವರು ಆಯ್ಕೆಯಾಗಿದ್ದಾರೆ.
ದೇವಸ್ಥಾನದ ಪುನಃ ಪ್ರತಿಷ್ಠ ಕಾರ್ಯವು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅರವಿಂದ ಭಟ್ ಪದ್ಯಾಣ ಹಾಗೂ ಕಾರ್ಯದರ್ಶಿಗಳಾದ ಈಶಾನ್ಯ ಪದ್ಯಾಣ ಇವರ ನೇತೃತ್ವದಲ್ಲಿ ನಡೆಯುತ್ತಿದೆ ಎಂದು ದೇವಸ್ಥಾನದ ಆಡಳಿತ ಮುಕ್ತೇಸರರಾದ ಸತ್ಯನಾರಾಯಣ ಭಟ್ ಸೇರಾಜೆಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳು, ಹೋಮ-ಹವನ, ಪೂಜೆ ಹಾಗೂ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *