ಕಡಬ ಜೆಎಂಜೆ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ-PRIME TV
ಕಡಬ: ಕಡಬದಲ್ಲಿರುವ JMJ Hospital ನಲ್ಲಿ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಶಿಜಿ ಜಾರ್ಜ್ ಮಾತನಾಡಿ, ಸಮಾಜದ ಅಭಿವೃದ್ಧಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮಹಿಳೆಯರು ನೀಡುತ್ತಿರುವ ಸೇವೆಯ ಮಹತ್ವವನ್ನು ವಿವರಿಸಿದರು. ಆರೋಗ್ಯ ಸೇವಾ…
ಉಪ್ಪಿನಂಗಡಿ : ಬೈಕ್ ಮತ್ತು ಕಾರು ನಡುವೆ ಅಪಘಾತ, ಬೈಕ್ ಸವಾರ ಮೃತ್ಯು -PRIME TV
ಉಪ್ಪಿನಂಗಡಿ: ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ. ಬಂದಾರು ಗ್ರಾಮದ ಕುರಾಯ…
ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಭಿನ್ನಮತ ಸ್ಫೋಟ: ಸೊಸೈಟಿ ಚುನಾವಣೆಯಲ್ಲಿ ಜಾತಿ ರಾಜಕೀಯ ಆರೋಪಿಸಿ 45ಕ್ಕೂ ಹೆಚ್ಚು ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ-PRIME TV
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಉಬರಡ್ಕ ಗ್ರಾಮದಲ್ಲಿ ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಸೊಸೈಟಿ ಚುನಾವಣೆಯಲ್ಲಿ ಜಾತಿ ರಾಜಕೀಯ ನಡೆದಿದೆ ಎಂದು ಆರೋಪಿಸಿ ಸುಮಾರು 45ಕ್ಕೂ ಹೆಚ್ಚು ಬಿಜೆಪಿ ಸಕ್ರಿಯ ಕಾರ್ಯಕರ್ತರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿರುವ ಘಟನೆ ರಾಜಕೀಯ ವಲಯದಲ್ಲಿ…
ಕಾಸರಗೋಡು ಗೋ-ಕುಟೀರಕ್ಕೆ ದೇಶೀಯ ತಳಿ ಹಾಗೂ ಗಿಡ್ಡ ತಳಿಯ ಗೋವುಗಳ ದಾನಕ್ಕೆ ಆಹ್ವಾನ-PRIME TV
ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಗೋ-ಕುಟೀರಕ್ಕೆ ಶುದ್ಧ ದೇಶೀಯ ತಳಿ ಮತ್ತು ಗಿಡ್ಡ ತಳಿಯ ಗೋವುಗಳನ್ನು ದಾನವಾಗಿ ನೀಡಲು ಭಗವದ್ಭಕ್ತರು, ಗೋ-ಭಕ್ತರು ಹಾಗೂ ಗೋ-ಪೋಷಕರಿಗೆ ಆಹ್ವಾನ ನೀಡಲಾಗಿದೆ. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಆಶ್ರಯದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸ್ಥಾಪಿಸಲಾಗುತ್ತಿರುವ…
ಪುತ್ತೂರು: ಮಹಿಳೆಯರ ಆರ್ಥಿಕ ಶಕ್ತಿಯಿಂದ ದೇಶದ ಅಭಿವೃದ್ಧಿ ಸಾಧ್ಯ – ಶಾಸಕ ಅಶೋಕ್ ರೈ-PRIME TV
ಪುತ್ತೂರು: ವ್ಯಕ್ತಿಗೂ ಸಮಾಜಕ್ಕೂ ಜೀವ ಕೊಡುವ ಶಕ್ತಿ ಮಹಿಳೆಯರಲ್ಲಿ ಇದೆ. ಬಡವರು ಹಾಗೂ ಮಹಿಳೆಯರು ಆರ್ಥಿಕವಾಗಿ ಬಲಿಷ್ಠರಾದಾಗ ಮಾತ್ರ ದೇಶ ಮತ್ತು ರಾಜ್ಯ ಅಭಿವೃದ್ಧಿಯ ಹಾದಿಯಲ್ಲಿ ಸಾಗಲು ಸಾಧ್ಯ. ಈ ಕಾರಣಕ್ಕಾಗಿ ಮಹಿಳಾ ಕೇಂದ್ರಿತ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ ಎಂದು…
ಕಡಬ ತಾಲೂಕು ಬಿಲ್ಲವ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ-PRIME TV
ಕಡಬ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕಡಬ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ (ರಿ.) ಪುತ್ತೂರು ಇದರ ಕಾರ್ಯದರ್ಶಿ ಬಿ.ಟಿ. ಮಹೇಶ್‌ಚಂದ್ರ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಂಘದ…
AISSEE ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿಗಳ ಸಾಧನೆ: ನಾಲ್ವರು ಅಂತಿಮ ಹಂತಕ್ಕೆ ಅರ್ಹ-PRIME TV
ಪುತ್ತೂರು/ಸುಳ್ಯ: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆ (AISSEE)ಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ನಾಲ್ವರು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅಂತಿಮ ಹಂತದ ಆಯ್ಕೆ ಪ್ರಕ್ರಿಯೆಗೆ ಅರ್ಹತೆ ಪಡೆದಿದ್ದಾರೆ. ಸತತ ನಾಲ್ಕು ವರ್ಷಗಳಿಂದ ವಿವಿಧ ಅರ್ಹತಾ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ದಾಖಲಿಸುತ್ತಿರುವ…
ಸುಳ್ಯ–ಕಡಬಕ್ಕೆ ‘ಆನೆ ಕಾರ್ಯಪಡೆ’ಗೆ ಗ್ರೀನ್ ಸಿಗ್ನಲ್: ಶಾಸಕಿ ಭಾಗೀರಥಿ ಮುರುಳ್ಯ ಮನವಿಗೆ ಸಿಎಂ ಸ್ಪಂದನೆ-PRIME TV
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನ ಜನತೆಗೆ ಕಾಡಾನೆ ಹಾವಳಿಯಿಂದ ಪರಿಹಾರ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಭಾಗಕ್ಕೆ ಪ್ರತ್ಯೇಕ ಆನೆ ಕಾರ್ಯಪಡೆ ರಚನೆಗೆ ಅಂತಿಮ ಅನುಮೋದನೆ ನೀಡಿದೆ. ಸುಳ್ಯ ವಿಧಾನಸಭಾ…
ಕೃಷಿ ಭೂಮಿ ಪಕ್ಕದಲ್ಲಿ ಲೇಔಟ್ ಕಾಮಗಾರಿ: ನ್ಯಾಯಾಲಯದಿಂದ ತಡೆಯಾಜ್ಞೆ-PRIME TV
ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಬೇರಿಕೆ ಪ್ರದೇಶದಲ್ಲಿ ಕೃಷಿ ಭೂಮಿಯ ಪಕ್ಕದಲ್ಲೇ ಲೇಔಟ್ ನಿರ್ಮಾಣ ಮಾಡುವ ಸಂದರ್ಭ ಅವೈಜ್ಞಾನಿಕವಾಗಿ ತಡೆಗೋಡೆ ನಿರ್ಮಿಸಿ ನೈಸರ್ಗಿಕ ಮಳೆನೀರು ಹರಿವಿನ ಮಾರ್ಗ ಹಾಗೂ ಒಳಚರಂಡಿ ವ್ಯವಸ್ಥೆಗೆ ಅಡ್ಡಿಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪುತ್ತೂರಿನ 2ನೇ ಹೆಚ್ಚುವರಿ ಸಿವಿಲ್…
ಪುತ್ತೂರು: ಮಾ.8ರಂದು ಮಹಿಳಾ ದಿನಾಚರಣೆ ಅಂಗವಾಗಿ ‘ಮಹಿಳಾ ಸಂಭ್ರಮ’ ಕಾರ್ಯಕ್ರಮ-PRIME TV
ಪುತ್ತೂರು: ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಹಿನ್ನಲೆಯಲ್ಲಿ ‘ಮಹಿಳಾ ಸಂಭ್ರಮ’ ಕಾರ್ಯಕ್ರಮವನ್ನು ಮಾ.8ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಗ್ರಾಮಾಂತರ…
