ಕಡಬ: ಕಡಬ ತಾಲೂಕಿನಲ್ಲಿ ಕಳೆದ ಐದು ತಿಂಗಳುಗಳಿಂದ ತ್ರೈಮಾಸಿಕ KDP (ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ) ಸಭೆ ನಡೆಯದೆ ಇರುವುದಕ್ಕೆ ಸಂಬಂಧಿಸಿದಂತೆ KDP ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿಯಮಿತವಾಗಿ ನಡೆಯಬೇಕಾದ ಸಭೆಯನ್ನು ಕರೆಯಲು ಸಂಬಂಧಿಸಿದವರು ಮೀನ–ಮೇಷ ಮಾಡುತ್ತಿರುವಂತಿದೆ ಎಂದು ಸದಸ್ಯರು ಆರೋಪಿಸಿದ್ದಾರೆ.

ಸಭೆ ಕರೆಯುವ ಜವಾಬ್ದಾರಿ ಹೊಂದಿರುವ ಶಾಸಕರು ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಟೀಕೆ ವ್ಯಕ್ತವಾಗಿದ್ದು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳೂ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲವೆಂದು ಸದಸ್ಯರು ಆರೋಪಿಸಿದ್ದಾರೆ. ಇದರಿಂದ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಚರ್ಚೆಗೆ ಅಡ್ಡಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಸಭೆಯನ್ನು ತಕ್ಷಣವೇ ಕರೆಯಬೇಕೆಂದು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರತಿಕ್ರಿಯೆ ದೊರಕದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂದು ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಎಲ್ಲಾ ಸದಸ್ಯರ ಪರವಾಗಿ ಶಿವರಾಮ ರೈ, ಅಶ್ರಫ್ ಶೇಡಿಗುಂಡಿ, ಉಷಾ ಜೋಯ್ ಹಾಗೂ ಪದ್ಮನಾಭ ಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *