ರಾಮಕುಂಜ:
ಪ್ರೌಢಶಾಲಾ 17ರ ವಯೋಮಾನದ ಬಾಲಕಿಯರ ವಿಭಾಗದ ಕರ್ನಾಟಕ ರಾಜ್ಯ ಕಬಡ್ಡಿ ತಂಡದ ಮ್ಯಾನೇಜರ್ ಆಗಿ ರಾಮಕುಂಜದ ಶ್ರೀರಾಮ ಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಅಂಬೇಡ್ಕರ್ ನಗರದಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ, ಶ್ರೀರಾಮ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಅಂಬೇಡ್ಕರ್ ನಗರದಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ, ಶ್ರೀರಾಮ ಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ನೇತೃತ್ವದ ತಂಡ ಕಂಚಿನ ಪದಕವನ್ನು ಪಡೆದುಕೊಂಡಿತ್ತು. ಅಲ್ಲದೆ, ಪ್ರಸಕ್ತ ಶೈಕ್ಷಣಿಕ ವರ್ಷದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಚಾಂಪಿಯನ್‌ಶಿಪ್‌ ಸಾಧನೆ ಮಾಡಿ ತಂಡವು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿತ್ತು. ಇದೇ ತಂಡವು ರಾಜ್ಯಮಟ್ಟದಲ್ಲಿ ಸತತವಾಗಿ ಎರಡನೇ ಬಾರಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ವಿಶೇಷವಾಗಿದೆ.

ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರ ನೇತೃತ್ವದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಓರ್ವ ವಿದ್ಯಾರ್ಥಿನಿ ರಾಜ್ಯ ತಂಡದ ನಾಯಕಿಯಾಗಿ ರಾಷ್ಟ್ರಮಟ್ಟದಲ್ಲಿ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ್ದಾರೆ. ಇದರೊಂದಿಗೆ, ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಹೈಜಂಪ್ ಸ್ಪರ್ಧೆಯಲ್ಲಿ ಓರ್ವ ವಿದ್ಯಾರ್ಥಿ ಹಾಗೂ ನಾಲ್ವರು ವಿದ್ಯಾರ್ಥಿಗಳು ಕಬಡ್ಡಿ ಮಿನಿ ಒಲಂಪಿಕ್‌ನಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಈ ಶೈಕ್ಷಣಿಕ ಸಾಲಿನಲ್ಲಿ ಶಾಲೆಯ ಕಬಡ್ಡಿ ತಂಡವು ಮೈಸೂರು ವಿಭಾಗ ಮಟ್ಟದ ಹಾಗೂ ರಾಜ್ಯಮಟ್ಟದ ಪಂದ್ಯಾಟಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ, ಪ್ರಫುಲ್ಲ ರೈ ಅವರನ್ನು 17ರ ವಯೋಮಾನದ ಬಾಲಕಿಯರ ಕರ್ನಾಟಕ ರಾಜ್ಯ ಕಬಡ್ಡಿ ತಂಡದ ಮ್ಯಾನೇಜರ್ ಆಗಿ ಆಯ್ಕೆ ಮಾಡಲಾಗಿದೆ.

ಪ್ರಫುಲ್ಲ ರೈ ಅವರು ಸಂತ ಫಿಲೋಮಿನ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿದ್ದು, ತಮ್ಮ ಕ್ರೀಡಾ ಜೀವನದಲ್ಲಿ ಏಳು ಬಾರಿ ರಾಷ್ಟ್ರಮಟ್ಟದ ಹಾಗೂ ಮೂರು ಬಾರಿ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯವನ್ನು ಪ್ರತಿನಿಧಿಸಿದ್ದಾರೆ. ಇವರು ನೇರಳಕಟ್ಟೆ ನಾರಾಯಣ ರೈ ಹಾಗೂ ಲಲಿತ ದಂಪತಿಯ ಪುತ್ರಿಯಾಗಿದ್ದು, ಕೇಳ್ಕ ನಿವಾಸಿ ಹಾಗೂ ಅಲಂಕಾರು ಸಿಎ ಬ್ಯಾಂಕ್ ಉದ್ಯೋಗಿ ಲೋಕನಾಥ ರೈ ಅವರ ಧರ್ಮಪತ್ನಿಯಾಗಿದ್ದಾರೆ.

ಪ್ರಫುಲ್ಲ ರೈ ಅವರ ಈ ಸಾಧನೆಗೆ ಶಿಕ್ಷಣ ವಲಯ ಹಾಗೂ ಕ್ರೀಡಾ ವಲಯದಿಂದ ವ್ಯಾಪಕ ಅಭಿನಂದನೆಗಳು ವ್ಯಕ್ತವಾಗಿವೆ.

Leave a Reply

Your email address will not be published. Required fields are marked *