ಪುತ್ತೂರು: ಪುತ್ತೂರು ಉಪ ವಿಭಾಗದ ಉಪ ಪೊಲೀಸ್ ಅಧಿಕಾರಿ (DSP)ಯಾಗಿ ಪ್ರಮೋದ್ ಕುಮಾರ್ ಅವರು ಶುಕ್ರವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ನಾಗೇಗೌಡ ಅವರು ತಮ್ಮ ಹುದ್ದೆಯನ್ನು ಪ್ರಮೋದ್ ಕುಮಾರ್ ಅವರಿಗೆ ಹಸ್ತಾಂತರಿಸಿದರು.





ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಹೊಸ ಉಪ ಪೊಲೀಸ್ ಅಧಿಕಾರಿಯಾಗಿ ಪ್ರಮೋದ್ ಕುಮಾರ್ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.




