ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ–2025ರ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಬರೋಬ್ಬರಿ 56 ಅಭ್ಯರ್ಥಿಗಳು ಉತ್ತೀರ್ಣರಾಗುವ ಮೂಲಕ ಅರ್ಹತೆ ಪಡೆದಿದ್ದಾರೆ. ಈ ಸಾಧನೆಯೊಂದಿಗೆ ವಿದ್ಯಾಮಾತಾ ಅಕಾಡೆಮಿ ಕರ್ನಾಟಕದಲ್ಲೇ ಅಗ್ರಗಣ್ಯ ತರಬೇತಿ ಸಂಸ್ಥೆಯಾಗಿ ತನ್ನ ಸ್ಥಾನವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಈ ಬಾರಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಪ್ರಸ್ತುತ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರು ಹಾಗೂ ಸರ್ಕಾರಿ ಶಿಕ್ಷಕರು ಸುಪ್ರೀಂಕೋರ್ಟ್ ನಿರ್ದೇಶನದಂತೆ ಬರೆದಿದ್ದು, ಇಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳಾಗಿ ಪರೀಕ್ಷೆ ಎದುರಿಸಿದ್ದು ವಿಶೇಷವಾಗಿತ್ತು. ಇಂತಹ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ಮಾರ್ಗದರ್ಶನದಲ್ಲಿ ಸಾಧಿಸಿದ ಯಶಸ್ಸು ಗಮನಾರ್ಹವಾಗಿದೆ.
ನಿರಂತರ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ ಹಾಗೂ ವಿದ್ಯಾಮಾತಾ ಅಕಾಡೆಮಿಯ ಮೂಲಕ ಪ್ರತಿದಿನ ರಾತ್ರಿ 7ರಿಂದ 10ರವರೆಗೆ ನಡೆಸಿದ ಆನ್‌ಲೈನ್ ಲೈವ್ ತರಗತಿಗಳು ಈ ಗಣನೀಯ ಸಾಧನೆಗೆ ಪ್ರಮುಖ ಕಾರಣವಾಗಿವೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಹಾಗೂ ತರಬೇತುದಾರರ ತಂಡವು ಉತ್ತೀರ್ಣರಾದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ನಡೆಯುವ GPSTR, HSTR ಹಾಗೂ PSTR ಸರ್ಕಾರಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ದೊರಕಿದೆ.
ವಿದ್ಯಾಮಾತಾ ಅಕಾಡೆಮಿಯ ವಿಶಿಷ್ಟ ತರಬೇತಿ ಕ್ರಮ
ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಪೂರ್ವ ಸಿದ್ಧತಾ ತರಬೇತಿಯನ್ನು ವ್ಯವಸ್ಥಿತವಾಗಿ ನಡೆಸಲಾಗಿತ್ತು. ತರಬೇತಿಯ ಭಾಗವಾಗಿ
ಪ್ರತಿದಿನ ರಾತ್ರಿ 7ರಿಂದ 10ರವರೆಗೆ ಆನ್‌ಲೈನ್ ತರಗತಿಗಳು,
ದಿನನಿತ್ಯ ಮಾಕ್ ಟೆಸ್ಟ್ (Mock Test),
ವಿಷಯಾಧಾರಿತ ವಿಶೇಷ ತರಗತಿಗಳು,
ಒಂದು ದಿನದ ವಿಶೇಷ ಮಾಹಿತಿ ಕಾರ್ಯಾಗಾರ,
ಸಮಗ್ರ ಅಧ್ಯಯನ ಸಾಮಗ್ರಿಗಳ ವಿತರಣೆ,
ಅಭ್ಯರ್ಥಿಗಳ ಗೊಂದಲ ನಿವಾರಣೆಗೆ ವೈಯಕ್ತಿಕ ಮಾರ್ಗದರ್ಶನ
ನೀಡಲಾಗಿತ್ತು. ಈ ಸಮರ್ಪಿತ ಮತ್ತು ಪರಿಣಾಮಕಾರಿ ತರಬೇತಿ ಕ್ರಮವೇ ಈ ಮಹತ್ವದ ಯಶಸ್ಸಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *