ಪುತ್ತೂರು: ಬದಿಯಡ್ಕದಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ತೂರು ಬನ್ನೂರು ನಿವಾಸಿ ಪಂಚಾಕ್ಷರಿ ಲೈಟಿಂಗ್ ಮಾಲೀಕ ಗಣೇಶ್ ಗೌಡ ಅವರ ಚಿಕಿತ್ಸೆಗೆ ಪುತ್ತೂರು ಜಾತ್ರೆ ವ್ಯಾಪಾರಸ್ಥರ ಸಂಘದಿಂದ ಆರ್ಥಿಕ ನೆರವು ನೀಡಲಾಗಿದೆ.

ಪುತ್ತೂರು ಜಾತ್ರೆ ವ್ಯಾಪಾರಸ್ಥರ ಸಂಘದ ಪ್ರಮುಖರಾದ ಮೋನಪ್ಪ ಮುತ್ತಪ್ಪ ಅಬಿಲಾಶ್, ನವೀನ್, ದೀಪುಸಾದ್, ರವಿ ಸೇರಿದಂತೆ ಸಂಘದ ಪದಾಧಿಕಾರಿಗಳು ಗಾಯಾಳು ಗಣೇಶ್ ಗೌಡ ಅವರ ಮನೆಗೆ ಭೇಟಿ ನೀಡಿ ಸಹಾಯಧನವನ್ನು ಹಸ್ತಾಂತರಿಸಿದರು.

ಅಪಘಾತದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಈ ಸಹಾಯಧನ ನೀಡಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *