ಸುಳ್ಯ: ಬೆಂಗಳೂರಿನ ಕೆ.ಎಸ್. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (K.S. Institute of Technology) ಯಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸುಳ್ಯದ ಕೆ.ಆರ್. ರಮ್ಯ ಅವರು ಫೆಬ್ರವರಿ 2ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಿ.ಎಚ್.ಡಿ ಪದವಿಯನ್ನು ಸ್ವೀಕರಿಸಿದ್ದಾರೆ.

ಡಾ. ಜಿ. ರಾಜೇಂದ್ರವರ ಮಾರ್ಗದರ್ಶನದಲ್ಲಿ ಮಂಡಿಸಿದ “Design & Development of Control Algorithm for Standalone DC Microgrid Cluster” ಎಂಬ ಸಂಶೋಧನಾ ಪ್ರಬಂಧಕ್ಕೆ ಅವರು ಪಿ.ಎಚ್.ಡಿ ಪದವಿ ಪಡೆದಿದ್ದಾರೆ.

ಶ್ರೀಮತಿ ರಮ್ಯ ಅವರು ಸುಳ್ಯದ ಹಳೆಗೇಟು ನಿವಾಸಿಗಳಾದ ಶ್ರೀ ಕೆ.ವಿ. ರಾಮಚಂದ್ರ ಮತ್ತು ಶ್ರೀಮತಿ ಗಿರಿಜಾ ದಂಪತಿಗಳ ಪುತ್ರಿಯಾಗಿದ್ದು, ಪ್ರಸ್ತುತ ಬೆಂಗಳೂರಿನ Accenture ಕಂಪನಿಯಲ್ಲಿ Associate Director ಆಗಿರುವ ಕುಶಾಲನಗರದ ಎ.ಟಿ. ಸುಜಿತ್ ಅವರ ಧರ್ಮಪತ್ನಿಯಾಗಿದ್ದಾರೆ.
ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸುಳ್ಯದ ಸೇಂಟ್ ಬ್ರಿಜಿಡ್ ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ನೆಹರು ಸರ್ಕಾರಿ ಕಾಲೇಜಿನಲ್ಲಿ ಹಾಗೂ ಇಂಜಿನಿಯರಿಂಗ್ ಶಿಕ್ಷಣವನ್ನು ಕೆ.ವಿ.ಜಿ ಕಾಲೇಜಿನಲ್ಲಿ ಪೂರ್ಣಗೊಳಿಸಿ, ನಂತರ ಎಂ.ಟೆಕ್ ಪದವಿಯನ್ನು ಬೆಂಗಳೂರಿನ ದಯಾನಂದ ಸಾಗರ್ ಕಾಲೇಜಿನಲ್ಲಿ ಪಡೆದಿದ್ದಾರೆ.

Leave a Reply

Your email address will not be published. Required fields are marked *