ಡಿ. 1ಂದು ಪುತ್ತೂರುನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ 1 ಸಾವಿರ ಕೋಟಿ ರೂಪಾಯಿಯ ಬಜೆಟ್ ಅಂದಾಜಿಸಲಾಗಿದ್ದು, ಕಡತ ಆರ್ಥಿಕ ಇಲಾಖೆಯಲ್ಲಿ ಇದೆ, ಇನ್ನೇನು ಒಂದೂವರೆ ತಿಂಗಳ ಒಳಗಾಗಿ ಡಿಪಿಆರ್ ಆಗಿ 2 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಪುತ್ತೂರು ಜನತೆಯ ಬಹುಕಾಲದ ಕನಸು ಈಡೇರಿದೆ, ನಾನು ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇನೆ.

ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ 1ನೇಯದಾಗಿ
ಬನ್ನೂರುನಲ್ಲಿ 40 ಎಕ್ರೆ ಜಾಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸಬೇಕು, 2ನೇಯದಾಗಿ ಆರೋಗ್ಯ ಇಲಾಖೆಯ ಕಡತವನ್ನು ತೆಗೆದು ಮೆಡಿಕಲ್ ಎಜುಕೇಶನ್ ಇಲಾಖೆಗೆ ವರ್ಗಾವಣೆ ಮಾಡಬೇಕು, 3ನೇಯುದಾಗಿ 300 ಬೆಡ್ ಆಸ್ಪತ್ರೆ ನಿರ್ಮಾಣ ಆಗಲೇಬೇಕು ಎಂದು ಬೇಡಿಕೆ ಮುಂದಿಟ್ಟಿದ್ದು, ಅದರಂತೆ ನನ್ನೆಲ್ಲಾ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಡೇರಿಸಿದ್ದಾರೆ ಎಂದು ಹೇಳಿದರು.

ಪುತ್ತೂರುಗೆ ಮೆಡಿಕಲ್ ಕಾಲೇಜು ಮಂಜೂರಾತಿಯ ಅಧಿಕೃತ ಆದೇಶ ಕೈಸೇರುತ್ತಿದ್ದಂತೆ ಕೋಡಿಂಬಾಡಿಯ ಶ್ರೀ ಮಹಿಷಮರ್ದಿನಿ ದೇವಸ್ಥಾನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಕೇಂದ್ರ ಜುಮಾ ಮಸೀದಿ ಹಾಗೂ ಪುತ್ತೂರು ಮಾಯಿದೆ ದೇವುಸ್ ಚರ್ಚ್‍ಗೆ ತೆರಳಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು.

ತಾಲ್ಲೂಕು ಆಸ್ಪತ್ರೆ ಹೆರಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ:
ಬನ್ನೂರುನಲ್ಲಿ 40 ಎಕ್ರೆ ಜಾಗದಲ್ಲಿ ಮೆಡಿಕಲ್ ಆಸ್ಪತ್ರೆ ನಿರ್ಮಾಣ ಆಗುತ್ತಿದ್ದಂತೆ ಪುತ್ತೂರು ತಾಲ್ಲೂಕು ಆಸ್ಪತ್ರೆ ಮಹಿಳೆಯರ ಹೆರಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಲಿದೆ ಎಂದರು. ಮುಂದೆ ಬನ್ನೂರು ಮಿನಿ ಮಣಿಪಾಲ ಆಗಲಿದೆ. ಸುಮಾರು 6 ಸಾವಿರದಿಂದ 7 ಸಾವಿರ ಮಂದಿಗೆ ಉದ್ಯೋಗ ದೊರಕಲಿದೆ. ಅದರಲ್ಲಿಯೂ ದ.ಕ. ಮತ್ತು ಉಡುಪಿ ಜಿಲ್ಲೆಯ ತುಳು ಮಾತನಾಡುವವರಿಗೆ ಆದ್ಯತೆಯಾಗಿ ಉದ್ಯೋಗ ನೀಡುವಂತಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ. ಉಪಾಧ್ಯಕ್ಷ ಎಂ.ಎಸ್. ಮಹಮ್ಮದ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಗ್ಯಾರಂಟಿ ಯೋಜನೆ ಅಧ್ಯಕ್ಷ ಉಮಾನಾಥ ರೈ, ಕಾಂಗ್ರೆಸ್ ಮುಖಂಡರಾದ
ಹೇಮನಾಥ ಶೆಟ್ಟಿ, ಲ್ಯಾನ್ಸಿ ಮಸ್ಕರೇನಸ್, ಅಬ್ದುಲ್ ರಹಿಮಾನ್ ಆಝಾದ್, ಅಮಲ ರಾಮಚಂದ್ರ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *