ಕಡಬ, ಜ.27:
ಸರಸ್ವತೀ ಸಮೂಹ ವಿದ್ಯಾಸಂಸ್ಥೆಗಳು, ಕಡಬ (ಹನುಮಾನ್ ನಗರ) ಇವರ ಜಂಟಿ ಆಶ್ರಯದಲ್ಲಿ 77ನೇ ಗಣರಾಜ್ಯೋತ್ಸವ ಹಾಗೂ ರಥಸಪ್ತಮಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಡಬ ಶ್ರೀ ಮಹಾಗಣಪತಿ ಫ್ಲವರ್ ಸ್ಟಾಲ್‌ನ ಮಾಲೀಕರಾದ ಶ್ರೀ ಪುಷ್ಪರಾಜ್ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ಬಳಿಕ ರಥಸಪ್ತಮಿ ಅಂಗವಾಗಿ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ ಅವರು ಮಾತನಾಡಿ, ಮಕ್ಕಳಲ್ಲಿ ದೇಶಭಕ್ತಿ ಬೆಳೆಸಬೇಕು. ನಾಡಿನ ಸೇವೆಯ ಮೂಲಕ ನಮ್ಮ ನೆಲದ ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.
ಇನ್ನೋರ್ವ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಸಹಕಾರ್ಯನಿರ್ವಹಣಾಧಿಕಾರಿ ಶ್ರೀ ವೆಂಕಟ್ರಮಣ ರಾವ್ ಮಂಕುಡೆ ಅವರು ಮಾತನಾಡಿ, ದೈನಂದಿನ ಜೀವನದಲ್ಲಿ ಯೋಗಾಸನವನ್ನು ಅಳವಡಿಸಿಕೊಂಡರೆ ಉತ್ತಮ ಆರೋಗ್ಯ ಸಾಧ್ಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತೀ ಆಂಗ್ಲ ಮಾಧ್ಯಮ ವಿಭಾಗದ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ಅವರು ವಹಿಸಿ, ಸಂವಿಧಾನದ ಮಹತ್ವದ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ವಿಭಾಗದ ಸಂಚಾಲಕರಾದ ಶ್ರೀ ಅಜಿತ್ ರೈ ಆರ್ತಿಲ, ಸರಸ್ವತೀ ವಿದ್ಯಾಲಯ ಪ್ರೌಢವಿಭಾಗದ ಮುಖ್ಯಗುರುಗಳಾದ ಶ್ರೀಮತಿ ಶೈಲಶ್ರೀ ಎಸ್. ರೈ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರುಗಳಾದ ಶ್ರೀ ವಸಂತ ಕರುಂಬೋಡಿ ಉಪಸ್ಥಿತರಿದ್ದರು.
ಮುಖ್ಯಗುರು ಶ್ರೀ ವಸಂತ ಕರುಂಬೋಡಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸೌಮ್ಯ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮಿಶ ಗೌಡ ಆರಿಗ ಹಾಗೂ ಸಹಶಿಕ್ಷಕಿ ಶ್ರೀಮತಿ ಸುಮಂಗಳಾ ಎ. ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *