ಪುತ್ತೂರು: ನಗರಸಭೆ ವ್ಯಾಪ್ತಿಯೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲುಲೇ ಕಾಮಗಾರಿ ಆರಂಭಿಸಿರುವುದು ಗಂಭೀರ ನಿಯಮ ಉಲ್ಲಂಘನೆಯಾಗಿದ್ದು, ಇದನ್ನು ಅಪರಾಧವೆಂದು ಪರಿಗಣಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಗರಸಭೆ ನಿಗದಿತ ಪ್ರಕ್ರಿಯೆ ಅನುಸರಿಸದೆ, ಟೆಂಡರ್ ಆಹ್ವಾನ ಹಾಗೂ ಮಂಜೂರಾತಿಗೆ ಮುನ್ನವೇ ಕಾಮಗಾರಿ ಕೈಗೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಹಣಕಾಸು ನಿಯಮಗಳ ಉಲ್ಲಂಘನೆ ನಡೆದಿರುವುದರ ಜೊತೆಗೆ ಸಾರ್ವಜನಿಕ ಹಣದ ದುರ್ಬಳಕೆ ಸಾಧ್ಯತೆ ಇದೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.




ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಜೊತೆಗೆ, ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಮೇಲ್ವಿಚಾರಣೆ ಬಲಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.
ನಗರಸಭೆ ಆಡಳಿತ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ನಿಯಮಾನುಸಾರ ತನಿಖೆ ನಡೆಸಿ ಕ್ರಮ ಜರುಗಿಸುವುದೇ ಎಂಬುದು ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.




