ಪುತ್ತೂರು: ಫ್ರೆಂಡ್ಸ್ ಕೆಮ್ಮಿಂಜೆ ಇವರ ಆಶ್ರಯದಲ್ಲಿ ದಿ. ಚೇತನ್ ಕೆಮ್ಮಿಂಜೆ ಇವರ ಸ್ಮರಣಾರ್ಥವಾಗಿ “ಪುತ್ತೂರು ಟ್ರೋಫಿ–2026” 8 ಜನರ ಸೂಪರ್ ಸಿಕ್ಸ್ ಅಂಡರ್ ಆರ್ಮ್ಸ್ ಕ್ರಿಕೆಟ್ ಪಂದ್ಯಾವಳಿ ಫೆಬ್ರವರಿ 15, 2026 ರಂದು ಭಾನುವಾರ ನಡೆಯಲಿದೆ. ಪಂದ್ಯಾವಳಿ ಬೆಳಿಗ್ಗೆ 9 ಗಂಟೆಯಿಂದ ಕೆಮ್ಮಿಂಜೆ ದೇವಸ್ಥಾನದ ಗದ್ದೆಯಲ್ಲಿ ಆಯೋಜಿಸಲಾಗಿದೆ.

ಪಂದ್ಯಾವಳಿಯಲ್ಲಿ ಭಾಗವಹಿಸಲು 1000 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ವಿಜೇತ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ನೀಡಲಾಗುತ್ತದೆ. ಜೊತೆಗೆ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ವಿಶೇಷ ಬಹುಮಾನಗಳನ್ನೂ ಘೋಷಿಸಲಾಗಿದೆ.

ಈ ಪಂದ್ಯಾವಳಿ ಸ್ಥಳೀಯ ಕ್ರೀಡಾಪಟುಗಳಿಗೆ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದ್ದು, ಕ್ರೀಡಾಭಿಮಾನಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಪಂದ್ಯಗಳು ನಡೆಯಲಿದ್ದು, ಆಸಕ್ತ ತಂಡಗಳು ಮುಂಗಡವಾಗಿ ಹೆಸರು ನೋಂದಾಯಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ ಆಯೋಜಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *