ನಿಧಿ
ಕಡಬ : ಹನುಮಾನ್ ನಗರದಲ್ಲಿರುವ ಸರಸ್ವತಿ ಇಂಗ್ಲಿಷ್ ಮೀಡಿಯಂ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿ ಗಮನಸೆಳೆದಿದೆ. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ಸಾಧನೆ ಮೆರೆದಿದ್ದಾರೆ.

ಪ್ರೇಕ್ಷ
ಈ ಬಾರಿ ಶಾಲೆಯ ವಿದ್ಯಾರ್ಥಿನಿ ನಿಧಿ 606 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ್ದಾಳೆ. ಪ್ರೇಕ್ಷಾ 605 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಪೋಷಕರು ಮತ್ತು ಸ್ಥಳೀಯರು ಸಹ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ


