ಪುತ್ತೂರು:
ನೆಲ್ಲಿಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈಶ ವಿದ್ಯಾಲಯವು 25ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬದ ಸಂಭ್ರಮವನ್ನು ಡಿಸೆಂಬರ್ 28ರಂದು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ನಾಳೆ ಬೆಳಗ್ಗೆ 9 ಗಂಟೆಗೆ ಪುತ್ತೂರಿನ ಜೈನ ಭವನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ಈಶ ಬೆಳ್ಳಿ ಹಬ್ಬ ಸಮಿತಿಯ ಗೌರವ ಅಧ್ಯಕ್ಷ ಹಾಗೂ ದ್ವಾರಕ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ಅವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10.30 ಗಂಟೆಯಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಸಭೆಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ರಾಮ ಮುಗ್ರೋಡಿ, ಮೈಸೂರಿನ ಎಲ್‌ಎಸ್‌ವಿ ಬುಕ್ ಇಂಡಿಯಾದ ದಿವಾಕರ ದಾಸ್, ವಿಜಯ ಬ್ಯಾಂಕಿನ ನಿವೃತ್ತ ಚೀಫ್ ಮ್ಯಾನೇಜರ್ ಹರ್ಷವರ್ಧನ ಪಡಿವಾಲ್ ಮುಡಿಯೂರು ಗುತ್ತು, ಪುತ್ತೂರು ವರ್ತಕರ ಸಂಘದ ಮಾಜಿ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಕ ಜಾನ್ ಕುಟ್ಟಿನಾ, ಸಂತ ಫಿಲೋಮಿನ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ವಿ., ಮಾಜಿ ಬಿಗ್ ಬಾಸ್ ಸ್ಪರ್ಧಿ ಧನರಾಜ್ ಆಚಾರ್, ಈಶ ವಿದ್ಯಾಲಯ ಬೆಳ್ಳಿ ಹಬ್ಬ ಸಮಿತಿ ಸಂಚಾಲಕ ಚಂದ್ರಶೇಖರ ಎಸ್., ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ, ಕೆಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಇಸ್ಮಾಯಿಲ್ ಪೆರುವಾಜೆ, ಈಶ ವಿದ್ಯಾಲಯದ ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಗಣೇಶ್ ರೈ, ಈಶ ವಿದ್ಯಾಲಯದ ಪ್ರಾಂಶುಪಾಲ ಡಾ. ಗೋಪಾಲಕೃಷ್ಣ ಎಂ., ಉಪ ಪ್ರಾಂಶುಪಾಲ ಶಾರದಾ ಕೃಷ್ಣ ಎಂ.ಎ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಉಚಿತ ತರಬೇತಿಗಳ ಮೂಲಕ ಮಾರ್ಗದರ್ಶನ ನೀಡುವ ವಿಶೇಷ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *