ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ.) ವಿಟ್ಲ ತಾಲೂಕು ಶಾಖೆ ಪುತ್ತೂರು ಇದರ ವತಿಯಿಂದ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಅಂಗವಾಗಿ ಕಡಬ, ಸುಳ್ಯ ಹಾಗೂ ಪುತ್ತೂರು ತಾಲೂಕಿನ ಪ.ಜಾತಿ ಪಂಗಡದ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆ ಏಪ್ರಿಲ್ 5, 2026 ರಂದು ನಡೆಯಿತು.

ತಾಲೂಕು ಶಾಖೆ ಅಧ್ಯಕ್ಷರಾದ ಬಿ.ಕೆ. ಅಣ್ಣಪ್ಪ ಕರೆಕಾಡು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಮುಗೇರ ಸಂಘ ಪುತ್ತೂರು ಅಧ್ಯಕ್ಷರಾದ ಶ್ರೀ ಸುಂದರ ಕೇಪುಳು ಉದ್ಘಾಟಿಸಿದರು.
ಅಂಬೇಡ್ಕರ್ ಭಾವಚಿತ್ರಕ್ಕೆ ನಲಿಕೆಯವರ ಸಮಾಜ ಸೇವಾ ಸಂಘ ಪುತ್ತೂರು ಅಧ್ಯಕ್ಷರಾದ ಶ್ರೀ ಶ್ರೀಧರ್ ಪೆರ್ಲಂಪಾಡಿ ಅವರು ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪ್ರತೀಕ್ಷಾ ಅವರು ಕ್ರಾಂತಿಗೀತೆ ಹಾಡಿ ಎಲ್ಲರ ಮನಗೆದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಪ್ರಸಾದ್ ಬೊಲ್ಮಾರ್ ಅವರು ಧನ್ಯವಾದಗಳನ್ನು ಸಲ್ಲಿಸಿದರು.






