2025-26ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ 94.10% ಫಲಿತಾಂಶ ದಾಖಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ



ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2025-26ನೇ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ (SSLC) ಪರೀಕ್ಷೆ-1ರ ಫಲಿತಾಂಶ ಇಂದು ಹೊರಬಿದ್ದಿದೆ. ಈ ಬಾರಿ ರಾಜ್ಯದಲ್ಲಿ ದಾಖಲೆಯ 94.10% ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂಡಳಿಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಪ್ರತಿವರ್ಷದಂತೆ ಈ ಬಾರಿಯೂ ಕರಾವಳಿ ಜಿಲ್ಲೆಗಳು ಶೈಕ್ಷಣಿಕ ಸಾಧನೆಯಲ್ಲಿ ಮೇಲುಗೈ ಸಾಧಿಸಿವೆ.
- ಪ್ರಥಮ ಸ್ಥಾನ: ದಕ್ಷಿಣ ಕನ್ನಡ ಜಿಲ್ಲೆ (98.40%)
- ದ್ವಿತೀಯ ಸ್ಥಾನ: ಉಡುಪಿ ಜಿಲ್ಲೆ (98.20%)
ತೃತೀಯ ಸ್ಥಾನ: ಉತ್ತರ ಕನ್ನಡ ಜಿಲ್ಲೆ (98.09%)


