ಕಡಬ: ಪುತ್ತೂರು ತಾಲೂಕಿನ ಹಾರಾಡಿಯ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಪುತ್ತೂರು–ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲನ–2025 ಸ್ಪರ್ಧೆಯಲ್ಲಿ ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.

ಸ್ಪರ್ಧೆಯಲ್ಲಿ ಶಾಲೆಯ ಮೊಹಮ್ಮದ್ ರಾಝೀಕ್, ಶೌರ್ಯ, ಇಹ ಎನ್., ನಯೋನಿಕ ಬಿ.ಸಿ., ಮುಫಿದ ಅಸ್ನ ಹಾಗೂ ಅನ್ವಿತಾ ಶೆಟ್ಟಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ್ದರು. ಕಿರಿಯ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ನಯೋನಿಕ ಬಿ.ಸಿ. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಹಿರಿಯ ವಿಭಾಗದ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಮುಫಿದ ಅಸ್ನ ಹಾಗೂ ಚಿತ್ರಕಲೆ ವಿಭಾಗದಲ್ಲಿ ಅನ್ವಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಾಧನೆಗಾಗಿ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಚಾಲಕರು, ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *