ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಅಂಗವಾಗಿ ನವೆಂಬರ್ 19ರಂದು ಪುತ್ತೂರಿನಲ್ಲಿ ಜಿಲ್ಲಾಮಟ್ಟದ ‘ಅಟಲ್ ವಿರಾಸತ್’ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ವಾಜಪೇಯಿ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇದು ಐತಿಹಾಸಿಕ ಕಾರ್ಯಕ್ರಮವಾಗಿ ಗುರುತಿಸಿಕೊಳ್ಳಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಳ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾರ್ಯಕ್ರಮವು ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಪಕ್ಕದ ಮೈದಾನದಲ್ಲಿ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಜಿಲ್ಲೆಯ ಶಾಸಕರು ಹಾಗೂ ಗಣ್ಯರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ವೇದಿಕೆಯ ಪೂರ್ವ ತಯಾರಿ ಕುರಿತು ಪಕ್ಷದ ಕಾರ್ಯಕರ್ತರೊಂದಿಗೆ ಸತೀಶ್ ಕುಂಪಳ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ವಿವಿಧ ಸಿದ್ಧತೆಯ ಚರ್ಚೆಗಳನ್ನು ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *