ಪುತ್ತೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ ದಕ್ಷಿಣ ಕನ್ನಡ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ, ರೆಡ್‌ಕ್ರಾಸ್, ಸೈಟ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ಮತ್ತು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ 150 ನೇ ಜನ್ಮದಿನಾಚರಣೆ ಪ್ರಯುಕ್ತ ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಪಾದಾಯಾತ್ರೆ ನಡೆಯಿತು.

ನೆಹರು ನಗರದ ವಿವೇಕಾನಂದ ಕಾಲೇಜು ಬಳಿಯ ವಿವೇಕಾನಂದರ ಪ್ರತಿಮೆ ಬಳಿಯಿಂದ ಹೊರಟ ಏಕತಾ ನಡಿಗೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಚಾಲನೆ ನೀಡಿದರು. ಅಲ್ಲಿಂದ ಹೊರಟ ಏಕತಾ ನಡಿಗೆಯು ನೆಹರು ನಗರ, ಮಂಜಲ್ಪಡ್ಡು, ಬೊಳುವಾರು, ಮುಖ್ಯರಸ್ತೆಯಾಗಿ ಮೂಲಕ ಸಾಗಿ ಪ್ರಧಾನ ಅಂಚೆ ಕಚೇರಿ ಮುಂಭಾಗದಿಂದಾಗಿ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ನಟರಾಜ ವೇದಿಕೆಯಲ್ಲಿ ಸಂಪನ್ನಗೊಂಡಿತು. ಬಳಿಕ ನಟರಾಜ ವೇದಿಕೆಯಲ್ಲಿ ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮ ನಡೆಯಿತು.


ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಪ್ರತಿಜ್ಞಾ ವಿಧಿ ಬೋಧಿಸಿದರು.


ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಏಕತಾ ನಡಿಗೆಯ ಸಂಯೋಜಕರಾದ ಅರುಣ್ ಶೇಟ್, ನಂದನ್ ಮಲ್ಯ, ದಿನೇಶ್ ಅಮ್ಮೂರು, ವಿವೇಕಾನಂದ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಅರುಣ್ ಪ್ರಕಾಶ್, ಫಿಲೋಮಿನಾ ಕಾಲೇಜಿ ಎನ್‌ಎಸ್‌ಎಸ್ ಅಧಿಕಾರಿ ಚಂದ್ರಶೇಖರ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲ್ಯಾನ್, ಮೈ ಭಾರತ್ ಆಡಳಿತಾಧಿಕಾರಿ ಜಗದೀಶ್, ಸ್ಕಿಟ್ಸ್ ಮತ್ತು ಗೈಡ್ಸ್‌ನ ಅಧಿಕಾರಿ ಸುನಿತಾ, ಉದ್ಯಮಿ ಸೀತಾರಾಮ ರೈ ಕೆದಂಬಾಡಿ ಗುತ್ತು, ಬಿಜೆಪಿ ಮುಖಂಡರಾದ ಯುವರಾಜ ಪೆರಿಯತ್ತೋಡಿ, ಸಂತೋಷ್ ರೈ ಕೈಕಾರ, ವಿರೂಪಾಕ್ಷ ಭಟ್, ನಾಗೇಶ್ ಟಿ.ಎಸ್., ಕೇಂದ್ರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಟಿ ಕೆ, ಯುವಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಂಯೋಜಕ ಶ್ರೀಕಾಂತ್ ಪೂಜಾರಿ ಬಿರಾವು,ಸಹಿತ ವಿವಿಧ ಶಾಲೆ, ಕಾಲೇಜುಗಳ ಟಿ.ಎಸ್., ಸಹಿತ ವಿವಿಧ ಶಾಲೆ, ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ, ರೆಡ್ ಕ್ರಾಸ್, ಸೈಟ್ ಮತ್ತು ಗೈಡ್ಸ್,ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

