ಪುತ್ತೂರು:
ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಅಮಾನುಷ ಗುಂಪುಹತ್ಯೆ ಹಾಗೂ ಕಳೆದ ಹಲವು ವರ್ಷಗಳಿಂದ ಅಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ನರಮೇಧ ಮತ್ತು ದೌರ್ಜನ್ಯವನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಪುತ್ತೂರಿನ ದರ್ಬೆ ವೃತ್ತದಲ್ಲಿ ಭಾನುವಾರ ತೀವ್ರ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಾಟಾಲಿ ಪ್ರಾಸ್ತಾವಿಕ ಭಾಷಣ ಮಾಡಿದರು. ನಂತರ ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಮುಖ್ಯ ಭಾಷಣ ಮಾಡಿ, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಉಗ್ರವಾಗಿ ಖಂಡಿಸಿದರು.
ಹಿಂದೂ ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಸಂಯೋಜಕ ಮೋಹನದಾಸ ಕಾಣಿಯೂರು ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ನಿರ್ಮಾಣವಾಗಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಅಂತಿಮ ಹಂತದಲ್ಲಿ ಬಾಂಗ್ಲಾದೇಶದ ಧ್ವಜವನ್ನು ಬೆಂಕಿ ಹಚ್ಚಿ ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು. ಈ ವೇಳೆ “ಹಿಂದುಗಳ ಮೇಲಿನ ದೌರ್ಜನ್ಯ ನಿಲ್ಲಬೇಕು”, “ಬಾಂಗ್ಲಾದೇಶ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂಬ ಘೋಷಣೆಗಳು ಮೊಳಗಿದವು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಜಿಲ್ಲಾ ಪ್ರಚಾರ–ಪ್ರಸಾರ ಪ್ರಮುಖ ಕೇಶವ್, ಜಿಲ್ಲಾ ಬಜರಂಗದಳದ ಸಹ ಸಂಯೋಜಕರಾದ ಪ್ರವೀಣ್ ಕಲ್ಲೇಗ, ಸಂತೋಷ್ ಉಪ್ಪಿನಂಗಡಿ, ವಿಹೆಚ್‌ಪಿ ಜಿಲ್ಲಾ ಪ್ರಮುಖರಾದ ಜನಾರ್ದನ ಬೆಟ್ಟ, ಸೀತಾರಾಮ ಮಾಣಿ, ರಾಜಾರಾಮ್ ಐತಾಳ್, ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕ ಜಯಂತ್ ಕುಂಜೂರುಪಂಜ, ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡ್, ಉಪಾಧ್ಯಕ್ಷ ಸೇಶಪ್ಪ ಬೆಳ್ಳಿಪ್ಪಾಡಿ, ಗ್ರಾಮಾಂತರ ಪ್ರಖಂಡ ಸಂಯೋಜಕ ಕಿರಣ್ ರಾಮಕುಂಜ, ಪ್ರಮುಖರಾದ ಹರೀಶ್ ದೋಳ್ಪಾಡಿ, ಜಯಂತ್ ಕರ್ಕುಂಜ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಹಿಂದೂ ಜಾಗರಣ ವೇದಿಕೆಯ ದಿನೇಶ್ ಪಂಜಿಗ, ಭರತ್ ಈಶ್ವರಮಂಗಲ, ಬಿಜೆಪಿ ಪ್ರಮುಖರಾದ ಸಾಜ ರಾಧಾಕೃಷ್ಣ ಆಳ್ವ, ವಿರೂಪಾಕ್ಷ ಮಚ್ಚಿಮಲೆ, ನಾಗೇಶ್ ಕೆಮ್ಮಾಯಿ, ವಿಶ್ವೇಶ್ವರ ಭಟ್ ಬಂಗಾರಡ್ಕ, ರಾಜೇಶ್ ಬನ್ನೂರು, ಶ್ರೀಮತಿ ವಿದ್ಯಾಗೌರಿ ಸೇರಿದಂತೆ ಅನೇಕ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ವಿಶ್ವ ಹಿಂದೂ ಪರಿಷದ್ ಗ್ರಾಮಾಂತರ ಪ್ರಖಂಡ ಅಧ್ಯಕ್ಷ ಜಯಂತ್ ಶೆಟ್ಟಿ ಕಂಬಳತ್ತಡ್ಡ ಧನ್ಯವಾದ ಸಮರ್ಪಿಸಿದರು. ವಿಶ್ವ ಹಿಂದೂ ಪರಿಷದ್ ಜಿಲ್ಲಾ ಸತ್ಸಂಗ ಪ್ರಮುಖ ರವಿಕುಮಾರ್ ಕೈತ್ತಡ್ಕ ಕಾರ್ಯಕ್ರಮ ನಿರೂಪಣೆ ಮಾಡಿದರು.

Leave a Reply

Your email address will not be published. Required fields are marked *