ತಾಲೂಕು ಕಚೇರಿ ಎದುರು ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಪ್ರಾರಂಭಗೊಂಡ ಪ್ರತಿಭಟನೆ ಸಂಜೆ 3.30ರ ವರೆಗೆ ಮುಂದುವರಿಯಿತು. ಪ್ರತಿಭಟನಾಕಾರರ ಆಗ್ರಹಕ್ಕೆ ಸ್ಪಂದಿಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಣಾ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, ಸಮಸ್ಯೆಗೆ ನ್ಯಾಯಸಮ್ಮತ ಪರಿಹಾರ ಒದಗಿಸುವ ಭರವಸೆ ನೀಡುತ್ತಾ, ಒಂದು ತಿಂಗಳೊಳಗೆ 12 ಅಡಿ ಅಗಲದ ಮಾರ್ಗವನ್ನು ಕಲ್ಪಿಸಲಾಗುವುದಾಗಿ ತಿಳಿಸಿದರು. ಇದಲ್ಲದೆ, ತಾತ್ಕಾಲಿಕವಾಗಿ ಮನೆಗೆ ಹೋಗಿ ಬರಲು ಅನುಕೂಲವಾಗುವಂತೆ ಹಳೆಯ ದಾರಿಯಲ್ಲಿ 4 ಅಡಿ ಅಗಲದ ಮಾರ್ಗವನ್ನು ನಾಳೆಯೇ ನಿರ್ಮಿಸಿ ನೀಡಲಾಗುವುದಾಗಿ ಭರವಸೆ ನೀಡಿದರು.





ಪ್ರತಿಭಟನೆಯಲ್ಲಿ ಭಾಗವಹಿಸಿದವರು ನ್ಯಾಯ ಒದಗಿಸುವ ಭರವಸೆ ನೀಡಿದ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದರು. ಅಲ್ಲದೆ, ಈ ಹೋರಾಟಕ್ಕೆ ಸಹಕಾರ ನೀಡಿದ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕದ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್ ಹಾಗೂ ಸಂಘಟನೆಯ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು.




