ಕಡಬ:
ಮಂಗಳೂರಿನ ಫಾದರ್ ಮುಲ್ಲರ್ ಸ್ಟೇಡಿಯಂನಲ್ಲಿ ಡಿಸೆಂಬರ್ 21, 2025 (ಭಾನುವಾರ) ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್ನಲ್ಲಿ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿದ್ದಾರೆ.

ಸ್ಪರ್ಧೆಯ ಕುಮಿಟೆ ವಿಭಾಗದಲ್ಲಿ ಏಳನೇ ತರಗತಿಯ ಶೃಜನ್, ವಿಖ್ಯಾತ್ ಕುಮಾರ್, ಹಾರ್ದಿಕ್ ಹಾಗೂ ಪೂರ್ಣೇಶ್ ಬಿ.ಕೆ. ಅವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಲ್ಲದೆ ಕಟ ವಿಭಾಗದಲ್ಲೂ ಏಳನೇ ತರಗತಿಯ ಶೃಜನ್ ಅವರು ಪ್ರಥಮ ಸ್ಥಾನ ಗಳಿಸಿ ಡಬಲ್ ಸಾಧನೆ ಮಾಡಿ ವಿಶೇಷ ಗಮನ ಸೆಳೆದಿದ್ದಾರೆ.

ಈ ಸಾಧನೆಯ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದೆ. ವಿದ್ಯಾರ್ಥಿಗಳಿಗೆ ಶಾಲೆಯ ಕರಾಟೆ ಶಿಕ್ಷಕ ಯಾದವ ಬಿರಂತಡ್ಕ ಹಾಗೂ ಸಂಸ್ಥೆಯ ಶಿಕ್ಷಕ ಶಿವಪ್ರಸಾದ್ ಕೆ. ಅವರು ಸೂಕ್ತ ತರಬೇತಿ ನೀಡಿ ಮಾರ್ಗದರ್ಶನ ನೀಡಿದ್ದರು.

ವಿದ್ಯಾರ್ಥಿಗಳ ಈ ಸಾಧನೆ ಸಂಸ್ಥೆಯ ಕ್ರೀಡಾ ಕ್ಷೇತ್ರದ ಬಲಿಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

Leave a Reply

Your email address will not be published. Required fields are marked *