Oct 31, 2025ಮಂಗಳೂರು : ಹಿ೦ದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
ಈ ಚಾರ್ಜ್‌ಶೀಟ್‌ನಲ್ಲಿ ಸ್ಪೋಟಕ ಅಂಶಗಳನ್ನು
ಎನ್‌ಐಎ ಉಲ್ಲೇಖಿಸಿದ್ದು ಪ್ರಮುಖವಾಗಿ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಿ ನಿಷೇಧಗೊಂಡಿರುವ ಪಾಪ್ರಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸದಸ್ಯರ ಕೈವಾಡ ಸ್ಪಷ್ಟವಾಗಿದೆ ಎಂದು ವರದಿಯಾಗಿದೆ.
2025ರ ಮೇ.1ರ೦ದು ಬಜ್ಪೆ ಬಳಿ ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು ಮಾತ್ರವಲ್ಲ ದಕ್ಷಿಣ ಕನ್ನಡದ ಹಲವು ತಾಲೂಕುಗಳು ಬಂದ್ ಆಗಿ ಪ್ರತಿಭಟನೆಗಳು ತೀವ್ರಗೊಂಡಿದ್ದವು. ಈ ಹತ್ಯೆ ಹಿಂದೆ ಉಗ್ರ ಸಂಘಟನೆಗಳ ಕೈವಾಡವಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದ್ದ ಕಾರಣ, ಪ್ರಕರಣವನ್ನು ಗೃಹ ಇಲಾಖೆ ನಿರ್ದೇಶನದ ಮೇರೆಗೆ ಎನ್‌ಐಗೆ
ಹಸ್ತಾಂತರ ಮಾಡಲಾಗಿತ್ತು.
ಎನ್‌ಐಎ ತನಿಖೆಯಿಂದ ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ ಅತೀ ದೊಡ್ಡ ಸಂಚು ಇರುವುದು ಬಹಿರ೦ಗವಾಗಿದೆ. ಸುಹಾಸ್ ಶೆಟ್ಟಿಯ ಚಟುವಟಿಕೆಗಳ ಮೇಲೆ ಹಲವಾರು ತಿಂಗಳ ಕಾಲ ಕಣ್ಣಿಟ್ಟಿದ್ದ ತಂಡ ಭಾರಿ ಪ್ಲಾನ್ ಮಾಡಿತ್ತು ಸುಹಾಸ್ ಶೆಟ್ಟಿ ಹತ್ಯೆ ಎಲ್ಲಿ ಮಾಡಬೇಕು, ಹೇಗೆ ಮಾಡಬೇಕು, ತಪ್ಪಿಸಿಕೊಂಡರೆ ಏನು?
ಪ್ರತಿದಾಳಿಯಾದರೆ ಹೇಗೆ? ಎಲ್ಲವೂ ಮೊದಲೇ ಪ್ಲಾನ್
ಮಾಡಲಾಗಿತ್ತು. ಹತ್ಯೆಯ ದಿನ ಆರೋಪಿಗಳಿಂದ ಎರಡು
ಕಾರುಗಳು ಬಳಕೆ ಮಾಡಲಾಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
